Wednesday, 19th June 2024

ಅಗ್ನಿ ದುರಂತದಲ್ಲಿ 15 ಜನರು ಸಾವು

ಚೀನಾ: ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತ್ಯದ ರಾಜಧಾನಿ ನಾನ್ಜಿಂಗ್ ನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ 44 ಜನರು ತೀವ್ರವಾಗಿ ಸುಟ್ಟುಹೋಗಿದ್ದಾರೆ.

ಯುಹುತೈ ಜಿಲ್ಲೆಯ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸ್ಥಳೀಯ ಅಗ್ನಿಶಾಮಕ ಇಲಾಖೆಗೆ ವರದಿ ಬಂದಿದೆ.

ರಕ್ಷಣಾ ಸಿಬ್ಬಂದಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಕಿಯನ್ನು ನಂದಿಸಿದರು ಮತ್ತು ಘಟನಾ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೊನೆಗೊಂಡಿತು. ಗಾಯಗೊಂಡ 44 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಉಪಕರಣಗಳನ್ನು ಇರಿಸಲಾಗಿದ್ದ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!