Thursday, 12th December 2024

ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ: 16 ಮಂದಿ ಸಾವು

ಚೀನಾ: ನೈಋತ್ಯ ಚೀನಾದ ಗುಝೌ ಪ್ರಾಂತ್ಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ.

ಶಾಂಜಿಯೋಶು ಕಲ್ಲಿದ್ದಲು ಗಣಿಯಲ್ಲಿ ಬೆಳಿಗ್ಗೆ 8:10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಕನ್ವೇಯರ್ ಬೆಲ್ಟ್‌ಗೆ ಬೆಂಕಿ ಹೊತ್ತಿ ಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೇ ತುರ್ತು ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವದ ಅತಿದೊಡ್ಡ ಹಸಿರುಮನೆ ಅನಿಲಗಳನ್ನು ಹೊರಸೂಸುವ ಚೀನಾ, ತನ್ನ ಗಾಳಿ ಮತ್ತು ಸೌರ ಶಕ್ತಿಯ ಸಾಮರ್ಥ್ಯದ ಬೃಹತ್ ವಿಸ್ತರಣೆಯ ಹೊರತಾಗಿಯೂ ವಿದ್ಯುತ್ಗಾಗಿ ಕಲ್ಲಿದ್ದಲಿನ ಮೇಲೆ ಹೆಚ್ಚು ಅವಲಂಬಿತವಾಗಿದೆ.