Pakistan Supreme Court: ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಸ್ಫೋಟ; ಸ್ಥಳದಿಂದ ಓಡಿ ಹೋದ ನ್ಯಾಯಾಧೀಶ
ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ನೆಲಮಾಳಿಗೆಯಲ್ಲಿ ಮಂಗಳವಾರ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್ ಕಟ್ಟಡದ ಕೇಂದ್ರ ಹವಾನಿಯಂತ್ರಣ ವ್ಯವಸ್ಥೆಯ ದುರಸ್ತಿ ಕಾರ್ಯದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ 12 ಜನರಲ್ಲಿ ಮೂವರನ್ನು ಪಿಮ್ಸ್ ಆಸ್ಪತ್ರೆಗೆ ಮತ್ತು ಉಳಿದ ಒಂಬತ್ತು ಜನರನ್ನು ಪಾಲಿಕ್ಲಿನಿಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇಬ್ಬರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಸ್ತಿ ಕಾರ್ಯದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದರು. "ತಜ್ಞರು ಇದು ಅನಿಲ ಸ್ಫೋಟ ಎಂದು ದೃಢಪಡಿಸಿದ್ದಾರೆ.
                                ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಲ್ಲಿ ಸ್ಫೋಟ ನಡೆದಿದೆ (ಸಂಗ್ರಹ ಚಿತ್ರ) -
                                
                                Vishakha Bhat
                            
                                Nov 4, 2025 4:55 PM
                            ಇಸ್ಲಾಮಾಬಾದ್: ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ನೆಲಮಾಳಿಗೆಯಲ್ಲಿ ಮಂಗಳವಾರ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) ಕನಿಷ್ಠ 12 ಜನರು (Pakistan Supreme Court) ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್ (Supreme Court) ಕಟ್ಟಡದ ಕೇಂದ್ರ ಹವಾನಿಯಂತ್ರಣ ವ್ಯವಸ್ಥೆಯ ದುರಸ್ತಿ ಕಾರ್ಯದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹಠಾತ್ ಸ್ಫೋಟದಿಂದ ಸುಪ್ರೀಂ ಕೋರ್ಟ್‌ನ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಕೀಲರು, ನ್ಯಾಯಾಧೀಶರು ಮತ್ತು ಇತರ ಸಿಬ್ಬಂದಿ ಹೊರಗೆ ಓಡಿ ಹೋಗಿದ್ದಾರೆ.
ಸ್ಫೋಟದಿಂದಾಗಿ ನ್ಯಾಯಾಲಯದ ಕೊಠಡಿ ಸಂಖ್ಯೆ 6ಕ್ಕೆ ದೊಡ್ಡ ಹಾನಿಯಾಗಿದೆ ಎಂದು ವರದಿಯಾಗಿದೆ. ನ್ಯಾಯಮೂರ್ತಿಗಳಾದ ಅಲಿ ಬಕರ್ ನಜಾಫಿ ಮತ್ತು ಶಹಜಾದ್ ಮಲಿಕ್ ಸ್ಫೋಟದ ಮೊದಲು ಪ್ರಕರಣವೊಂದನ್ನು ವಿಚಾರಣೆ ನಡೆಸುತ್ತಿದ್ದರು. ನ್ಯಾಯಾಲಯದ ಸಂಕೀರ್ಣದ ಕೆಳ ಮಹಡಿಗಳಲ್ಲಿ ಜೋರಾದ ಸ್ಫೋಟದ ಸದ್ದು ಕೇಳಿಸಿತು, ಇದು ತುರ್ತು ಶಿಷ್ಟಾಚಾರಗಳನ್ನು ತ್ವರಿತವಾಗಿ ಸಕ್ರಿಯಗೊಳಿಸಲು ಕಾರಣವಾಯಿತು. ಭದ್ರತಾ ಪಡೆಗಳು ಮತ್ತು ರಕ್ಷಣಾ ತಂಡಗಳು ಕೆಲವೇ ನಿಮಿಷಗಳಲ್ಲಿ ಸುಪ್ರೀಂ ಕೋರ್ಟ್‌ಗೆ ತಲುಪಿದವು.
ಈ ಸುದ್ದಿಯನ್ನೂ ಓದಿ: Pakistan-Afghanistan War: ತಾಲಿಬಾನ್ ಜತೆ ಶಾಂತಿ ಮಾತುಕತೆ ನಡುವೆಯೇ ಪಾಕಿಸ್ತಾನ-ಅಫ್ಘಾನ್ ಗಡಿಯಲ್ಲಿ ಘರ್ಷಣೆ; 5 ಪಾಕ್ ಸೈನಿಕರು ಬಲಿ
ನೆಲಮಾಳಿಗೆಯಲ್ಲಿರುವ ಹವಾನಿಯಂತ್ರಣ ಸ್ಥಾವರದ ಬಳಿ ನಿರ್ವಹಣಾ ಕೆಲಸ ಮಾಡುತ್ತಿದ್ದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಸ್ಫೋಟ ನಡೆದ ಸ್ಥಳದ ಬಳಿಯ ನೆಲಮಾಳಿಗೆಯಲ್ಲಿರುವ ಕ್ಯಾಂಟೀನ್ ಅನ್ನು ಸುಪ್ರೀಂ ಕೋರ್ಟ್ ಸಿಬ್ಬಂದಿಗೆ ಮಾತ್ರ ಮೀಸಲಿಡಲಾಗಿದೆ. ಇಸ್ಲಾಮಾಬಾದ್ ಐಜಿಪಿ ಅಲಿ ನಾಸಿರ್ ರಿಜ್ವಿ ಅವರು ಸುಪ್ರೀಂ ಕೋರ್ಟ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕ್ಯಾಂಟೀನ್‌ನಲ್ಲಿ ಹಲವು ದಿನಗಳಿಂದ ಅನಿಲ ಸೋರಿಕೆಯಾಗುತ್ತಿತ್ತು, ದುರಸ್ತಿ ಕಾರ್ಯದ ಸಮಯದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದರು. "ತಜ್ಞರು ಇದು ಅನಿಲ ಸ್ಫೋಟ ಎಂದು ದೃಢಪಡಿಸಿದ್ದಾರೆ" ಎಂದು ಅವರು ಹೇಳಿದರು.
⚡ At least 4 people were injured after an explosion in the basement of the Supreme Court of Pakistan. More details awaited pic.twitter.com/p7s4B11X0r
— OSINT Updates (@OsintUpdates) November 4, 2025
ಗಾಯಗೊಂಡ 12 ಜನರಲ್ಲಿ ಮೂವರನ್ನು ಪಿಮ್ಸ್ ಆಸ್ಪತ್ರೆಗೆ ಮತ್ತು ಉಳಿದ ಒಂಬತ್ತು ಜನರನ್ನು ಪಾಲಿಕ್ಲಿನಿಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇಬ್ಬರು ಜನರ ಸ್ಥಿತಿ ಗಂಭೀರವಾಗಿದೆ ಎಂದು ರಿಜ್ವಿ ಹೇಳಿದ್ದಾರೆ, ಎಸಿ ತಂತ್ರಜ್ಞನಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರ ದೇಹದ ಶೇಕಡಾ 80 ರಷ್ಟು ಭಾಗ ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
ಕಳೆದ ತಿಂಗಳು ಪಾಕಿಸ್ತಾನದ ನೈಋತ್ಯ ನಗರವಾದ ಕ್ವೆಟ್ಟಾದಲ್ಲಿರುವ ಭದ್ರತಾ ಪಡೆಗಳ ಪ್ರಧಾನ ಕಚೇರಿಯ ಹೊರಗೆ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದರು. ಸ್ಫೋಟದ ಶಬ್ದ ಎಷ್ಟು ಪ್ರಬಲವಾಗಿತ್ತೆಂದರೆ ಅದು ಮೈಲುಗಳಷ್ಟು ದೂರದಿಂದ ಶಬ್ದ ಕೇಳಿಸಿತ್ತು ಎಂದು ನಿವಾಸಿಗಳು ಹೇಳಿದ್ದರು. ಕಾರಿನಲ್ಲಿ ಬಾಂಬ್ ಇರಿಸಿ ಸ್ಫೋಟ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಟ್ಟಾ ಪ್ರಾಂತೀಯ ರಾಜಧಾನಿಯಾಗಿರುವ ಬಲೂಚಿಸ್ತಾನದಲ್ಲಿ ನಾಗರಿಕರು ಮತ್ತು ಭದ್ರತಾ ಪಡೆಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಳ್ಳುವ ಪ್ರತ್ಯೇಕತಾವಾದಿ ಗುಂಪುಗಳು ಈ ರೀತಿಯ ಸೋಟವನ್ನು ನಡೆಸುತ್ತಲೇ ಇರುತ್ತವೆ. ಬಲೂಚ್ ಲಿಬರೇಶನ್ ಆರ್ಮಿಹಾಗೂ ಪಾಕಿಸ್ತಾನ ಸೇನೆ ನಡುವೆ ಆಗಾಗ ಘರ್ಷಣೆಗಳು ನಡೆಯುತ್ತಿರುತ್ತವೆ.