ಕೊಲಂಬೊ: ಬುಧವಾರದಿಂದ ಶ್ರೀಲಂಕಾದ ಲೋಕೋಪಯೋಗಿ ಆಯೋಗ ಪ್ರತಿದಿನ 10 ಗಂಟೆಗಳ ಕಾಲ ವಿದ್ಯುತ್ ಕಡಿತ ಗೊಳಿಸುವುದಾಗಿ ಪ್ರಕಟಿಸಿದೆ.
ಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಳ್ಳುತ್ತಿರುವುದು ಕಾರಣವಾಗಿದೆ. ಡೀಸೆಲ್ ಕೊರತೆಯೇ ಎಲ್ಲಾ ಸಮಸ್ಯೆಗಳಿಗೆ ಮೂಲ ಎಂದು ಸ್ಥಳೀಯ ತಜ್ಞರು ಹೇಳಿದ್ದಾರೆ.
ಇಂಧನ ಕೊರತೆ ಮತ್ತು ಜನರೇಟರ್‌ಗಳ ಅಲಭ್ಯತೆಯಿಂದಾಗಿ ಅಸಮರ್ಪಕ ವಿದ್ಯುತ್ ಉತ್ಪಾದನೆಯಿಂದಾಗಿ ಬೇಡಿಕೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು ಎಂದು ಬೋರ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.