ಕೆನ್‌ಬೆರಾ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ( Anthony Albanese ) ಅವರ ಆಹ್ವಾನದ ಮೇರೆಗೆ ಜುಲೈ 8 ರಿಂದ ಜುಲೈ 10, 2026 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರಕ್ಕೆ ಭೇಟಿ ನೀಡಲಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯಲಿರುವ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ನಾಯಕರ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ಭೇಟಿಗೂ ಮುನ್ನ ಮೋದಿಯವರಿಗೆ ಆನ್‌ಲೈನ್‌ನಲ್ಲಿ ಜೀವಬೆದರಿಕೆ ಬಂದಿದ್ದು, ಆಸ್ಟ್ರೇಲಿಯನ್ ಫೆಡರಲ್ ಪೊಲೀಸ್ (AFP) ತನಿಖೆ ಕೈಗೆತ್ತಿಕೊಂಡಿದೆ.
ಜುಲೈ 9 ರಂದು ಮೆಲ್ಬೋರ್ನ್‌ನ ಮಾರ್ವೆಲ್ ಸ್ಟೇಡಿಯಂನಲ್ಲಿ ನಡೆಯಲಿರುವ "ಮೆಲ್ಬೋರ್ನ್ ಮೀಟ್ಸ್ ಮೋದಿ" (Melbourne Meets Modi) ಸಮುದಾಯ ಕಾರ್ಯಕ್ರಮದ ಫೇಸ್‌ಬುಕ್ ಪೋಸ್ಟ್‌ನ ಕಾಮೆಂಟ್ ವಿಭಾಗದಲ್ಲಿ ಈ ಬೆದರಿಕೆ ಹಾಕಲಾಗಿದೆ. ಅಬು ಮುಸ್ತಫಾ" ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ, ಈ ಬೆದರಿಕೆ ಬಂದಿದ್ದು, ಮೋದಿ ಅವರು ತಮ್ಮ ಸಾವಿಗಾಗಿ ಆಸ್ಟ್ರೇಲಿಯಾಕ್ಕೆ ಬರುತ್ತಿದ್ದಾರೆ ಎಂದು ಕಮೆಂಟ್ ಹಾಕಲಾಗಿದೆ. ಆಸ್ಟ್ರೇಲಿಯಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಬೆದರಿಕೆ ಹಾಕಿದ ಖಾತೆಯ ಐಪಿ ವಿಳಾಸವನ್ನು ಈಗಾಗಲೇ ಪತ್ತೆ ಹಚ್ಚಿದ್ದಾರೆ.ಬಂಧನ: ಸದ್ಯದ ಮಾಹಿತಿಯ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಯಾವುದೇ ಅಧಿಕೃತ ಬಂಧನಗಳಾಗಿಲ್ಲ ಎಂದು ತಿಳಿದು ಬಂದಿದೆ.
ಮೋದಿ ಆಗಮನದ ಕುರಿತು ಟ್ವೀಟ್ ಮಾಡಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ನನ್ನ ಸ್ನೇಹಿತ ಮೋದಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ವ್ಯಾಪಾರ, ರಕ್ಷಣೆ ಮತ್ತು ಭದ್ರತೆ ಮತ್ತು ತಂತ್ರಜ್ಞಾನದ ಕುರಿತು ಉಭಯ ದೇಶಗಳು ಚರ್ಚೆ ನಡೆಸಲಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ವಿಶ್ವದ ನಾಲ್ಕನೇ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ, ಭಾರತವು ಆಸ್ಟ್ರೇಲಿಯಾಕ್ಕೆ ನಿರ್ಣಾಯಕ ಆರ್ಥಿಕ ಪಾಲುದಾರ" ಎಂದು ಆಸ್ಟ್ರೇಲಿಯಾ ತಿಳಿಸಿದೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ; ಮೋದಿ-ಟ್ರಂಪ್ ಸೂಚನೆ
2025 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಅಲ್ಬನೀಸ್ ಕೊನೆಯ ಬಾರಿಗೆ ಮೋದಿ ಅವರನ್ನು ಭೇಟಿಯಾಗಿದ್ದರು. ಮೋದಿ ಅವರು ಗವರ್ನರ್ ಜನರಲ್ ಸ್ಯಾಮ್ ಮೋಸ್ಟಿನ್ ಎಸಿ ಅವರನ್ನು ಭೇಟಿ ಮಾಡಿ, ಭಾರತ-ಆಸ್ಟ್ರೇಲಿಯಾ ಸಿಇಒಗಳ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ವಲಸೆ ಬಂದವರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.