ಇಜ್ಮಿರ್ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.
ಏಜಿಯನ್ ಈಶಾನ್ಯ ಭಾಗದ ಸಮೋಸ್ನಲ್ಲಿ ಕಳೆದ ಶುಕ್ರವಾರ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಒಟ್ಟು 962 ಜನರು ಗಾಯಗೊಂಡಿದ್ದು, ಈ ಪೈಕಿ 743 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 219 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಾಶ್ರಿತರಿಗಾಗಿ ಈವರೆಗೆ 1,864 ಟೆಂಟ್ಗಳನ್ನು ಸ್ಥಾಪಿಸಲಾಗಿದೆ.
ಭೂಕಂಪದಿಂದಾಗಿ ಕುಸಿದು ಬಿದ್ದಿರುವ ಕಟ್ಟಡಗಳ ಅವಶೇಷಗಳಡಿಯಿಂದ 105 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಧಿಕಾರ ಹೇಳಿದೆ.