ಟ್ರಂಪ್‌ಗೆ ನೊಬೆಲ್ ಅರ್ಪಣೆ ಎಂದ ಮಚಾಡೋಗೆ ಭಾರೀ ಮುಖಭಂಗ; ನೊಬೆಲ್ ಸಮಿತಿ ನೀಡಿದ ಎಚ್ಚರಿಕೆಯೇನು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶಾಂತಿ ಪ್ರಶಸ್ತಿಗೆ ಅರ್ಹರು ಎಂದು ನೊಬೆಲ್ ಪ್ರಶಸ್ತಿ ವಿಜೇತೆ ಮತ್ತು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾಡೋ ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ನೊಬೆಲ್ ಸಮಿತಿ, ನೊಬೆಲ್ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು, ಹಂಚಿಕೊಳ್ಳಲು ಅಥವಾ ಇತರರಿಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಸಂಗ್ರಹ ಚಿತ್ರ -
ನಾರ್ವೆ: ಎಂಟು ಯುದ್ಧಗಳನ್ನು ಕೊನೆಗೊಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರು ಶಾಂತಿ ಪ್ರಶಸ್ತಿಗೆ (Nobel Peace Prize) ನಿಜವಾಗಿಯೂ ಅರ್ಹರು ಎಂದು ನೊಬೆಲ್ ಪ್ರಶಸ್ತಿ ವಿಜೇತೆ ಮತ್ತು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ (Venezuelan opposition leader) ಮರಿಯಾ ಕೊರಿನಾ ಮಚಾಡೋ (María Corina Machado) ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ನೊಬೆಲ್ ಸಮಿತಿ, ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಲು, ಹಂಚಿಕೊಳ್ಳಲು ಅಥವಾ ಇತರರಿಗೆ ವರ್ಗಾಯಿಸಲು ಸಾಧ್ಯವಿಲ್ಲ. ಒಮ್ಮೆ ಇದು ಘೋಷಣೆಯಾದ ಬಳಿಕ ಸಾರ್ವಕಾಲಿಕವಾಗಿ ಇದು ಮಾನ್ಯವಾಗಿರುತ್ತದೆ ಎಂದು ಹೇಳಿದೆ.
ಮರಿಯಾ ಕೊರಿನಾ ಮಚಾಡೋ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಬಯಸುವುದಾಗಿ ಹೇಳಿದ ಬಳಿಕ ಪ್ರತಿಕ್ರಿಯಿಸಿದ ನಾರ್ವೇಜಿಯನ್ ನೊಬೆಲ್ ಸಮಿತಿ, ಶಾಂತಿ ಪ್ರಶಸ್ತಿಯನ್ನು ನೀವು ಯಾರೊಂದಿಗೂ ಹಂಚಿಕೊಳ್ಳಲು, ನಿಮ್ಮಿಂದ ಇದು ಸಮಿತಿ ಹಿಂತೆಗೆದುಕೊಳ್ಳಲು ಅಥವಾ ಬೇರೆ ಯಾರಿಗೂ ಇದನ್ನು ವರ್ಗಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಬಸವನವಾಗೇವಾಡಿ ಪುರಸಭೆಯಿಂದ ಸಾವಿನ ಗುಂಡಿಗೆ ಸ್ವಾಗತ !
ಮರಿಯಾ ಕೊರಿನಾ ಮಚಾಡೋ ಅವರು ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಅವರಿಗೆ ನೊಬೆಲ್ ಪ್ರಶಸ್ತಿ ನೀಡುವ ಪ್ರಸ್ತಾಪದ ಬಗ್ಗೆ ಚರ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ ತಿಳಿಸಿದ್ದರು.
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಬಂಧನದ ಬಳಿಕ ಅಮೆರಿಕ ಮತ್ತು ವೆನೆಜುವೆಲಾ ನಡುವೆ ಉದ್ವಿಗ್ನತೆ ಹೆಚ್ಚಾಗಿರುವಾಗಲೇ ಮರಿಯಾ ಕೊರಿನಾ ಮಚಾಡೋ ಅವರು ಅಮೆರಿಕಕ್ಕೆ ಬರಲು ಬಯಸುತ್ತಿರುವುದು ತುಂಬಾ ಒಳ್ಳೆಯದು ಎಂದು ನಾನು ಭಾವಿಸುತ್ತೇನೆ ಮತ್ತು ಅದರ ಕಾರಣ ನಾನು ಅರ್ಥಮಾಡಿಕೊಂಡಿದ್ದೇನೆ ಎಂದು ಟ್ರಂಪ್ ಹೇಳಿದ್ದರು.
ಮತ್ತೊಂದು ಅತ್ಯಾಚಾರ ದೂರು: ಕೇರಳ ಶಾಸಕ ರಾಹುಲ್ ಮಮ್‌ಕೂಟತಿಲ್ ಬಂಧನ
ಡೊನಾಲ್ಡ್ ಟ್ರಂಪ್ ಅವರು ಈ ಹಿಂದೆ ಹಲವು ಬಾರಿ ತಮ್ಮನ್ನು ತಾವು ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹ ವ್ಯಕ್ತಿ ಎಂದು ಹೇಳಿದ್ದರು. ಎರಡನೇ ಅಧ್ಯಕ್ಷೀಯ ಅವಧಿಯಲ್ಲಿ ತಾವು ಎಂಟು ಯುದ್ಧಗಳನ್ನು ಕೊನೆಗೊಳಿಸಿರುವುದಾಗಿ ಹೇಳಿದ್ದು, ಇವು ಯಾರೂ ನಿಲ್ಲಿಸಲು ಸಾಧ್ಯವಿಲ್ಲದ ಯುದ್ಧಗಳಾಗಿತ್ತು ಎಂದು ತಿಳಿಸಿದ್ದರು.
ಅಲ್ಲದೇ 2009ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಏನೂ ಮಾಡದೆ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿತ್ತು ಎಂದು ಅವರು ಹೇಳಿದರು.