ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Modi-Trump Meet: ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ಒಪ್ಪಂದಕ್ಕ ಸಹಿ ಹಾಕಿದ್ದಾರೆ. ನಿನ್ನೆ ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದ್ದು, ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು.

ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ

ಟ್ರಂಪ್‌ ಜೊತೆಯಲ್ಲಿ ಮೋದಿ

Profile Vishakha Bhat Feb 14, 2025 8:36 AM

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ(Modi-Trump Meet)ಮಹತ್ವದ ಮಾತುಕತೆ ನಡೆಸಿ ಒಪ್ಪಂದಕ್ಕ ಸಹಿ ಹಾಕಿದ್ದಾರೆ. ನಿನ್ನೆ ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದ್ದು, ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು. ಈ ವೇಳೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು.

2030 ರ ವೇಳೆಗೆ ಭಾರತ-ಅಮೆರಿಕ ವ್ಯಾಪಾರವನ್ನು ದ್ವಿಗುಣಗೊಳಿಸುವ ಬಗ್ಗೆ ಪ್ರಧಾನಿ ಮಾತನಾಡಿದರು. 2030 ರ ವೇಳೆಗೆ ನಮ್ಮ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸಿ 500 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಅವರು ಹೇಳಿದರು.



ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನಕಾರಿಯಾಗುವ ವ್ಯಾಪಾರ ಒಪ್ಪಂದವನ್ನು ತೀರ್ಮಾನಿಸಲು ನಮ್ಮ ತಂಡಗಳು ಶೀಘ್ರದಲ್ಲೇ ಕೆಲಸ ಮಾಡುತ್ತವೆ. ಭಾರತದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ತೈಲ ಮತ್ತು ಅನಿಲ ವ್ಯಾಪಾರವನ್ನು ಬಲಪಡಿಸುತ್ತೇವೆ. ಇಂಧನ ಮೂಲಸೌಕರ್ಯದಲ್ಲಿ ಹೂಡಿಕೆ ಹೆಚ್ಚಾಗುತ್ತದೆ ಎಂದು ಹೇಳಿದರು.



ಇದೇವೇಳೆ ಮಾತನಾಡಿದ ಟ್ರಂಪ್, ಭಾರತದೊಂದಿಗೆ ಅದ್ಭುತ ವ್ಯಾಪಾರ ಒಪ್ಪಂದಗಳನ್ನು" ನಿರೀಕ್ಷಿಸುವುದಾಗಿ ಹೇಳಿದರು. ಅಮೆರಿಕವು ಇತರ ದೇಶಗಳು ತನ್ನ ಮೇಲೆ ವಿಧಿಸುವ ಮೊತ್ತದಷ್ಟೇ ಸುಂಕ ವಿಧಿಸುತ್ತದೆ ಎಂದು ಹೇಳಿದರು. ಭಾರತವು ಅತಿ ಹೆಚ್ಚು ಶುಲ್ಕ ವಿಧಿಸುವ ದೇಶಗಳಲ್ಲಿ ಒಂದು. ಹೆಚ್ಚು ಅಥವಾ ಕಡಿಮೆ ಇಲ್ಲ. ಅವರು ನಮಗೆ ತೆರಿಗೆ ಅಥವಾ ಸುಂಕವನ್ನು ವಿಧಿಸುತ್ತಾರೆ. ನಾವು ಕೂಡಾ ನಿಖರವಾಗಿ ಅಷ್ಟೇ ಸುಂಕವನ್ನು ವಿಧಿಸುತ್ತೇವೆ. ಆ ಪ್ರಮಾಣ ಎಷ್ಟು ಎಂಬ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ: Narendra Modi: ಫೆ.12,13 ರಂದು ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ: ಟ್ರಂಪ್‌ ಜೊತೆ ಮಹತ್ವದ ಚರ್ಚೆ!

ನಿನ್ನೆ ವಾಷಿಂಗ್ಟನ್ ತಲುಪಿದ ಪ್ರಧಾನಿ ನರೇಂದ್ರ ಮೋದಿ, ಟ್ರಂಪ್‌ ಭೇಟಿಗೂ ಮುನ್ನ ವಾಷಿಂಗ್ಟನ್ ಡಿಸಿಯ ಬ್ಲೇರ್ ಹೌಸ್‌ನಲ್ಲಿ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ ವಾಲ್ಟ್ಜ್ ಮತ್ತು ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರೊಂದಿಗೆ ಸಭೆ ನಡೆಸಿದರು.