ಲಂಡನ್: ಕೆಂಬ್ರಿಡ್ಜ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಡಾ.ಮನಾಲಿ ದೇಸಾಯಿ ನೇಮಕಗೊಂಡಿ ದ್ದಾರೆ.
ನ್ಯೂನ್‌ಹ್ಯಾಮ್ ಕಾಲೇಜಿನ ಪ್ರಾಧ್ಯಾಪಕಿ, ವಿಶ್ವವಿದ್ಯಾನಿಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ಲಂಡನ್ ವಿಶ್ವವಿದ್ಯಾಲಯದ ಒಂದು ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕಂಪ್ಯಾರಿಟಿವ್ ಆಯಂಡ್ ಹಿಸ್ಟಾರಿಕ್ ಸೋಷಿಯಾಲಜಿಯ ರೀಡರ್ ಹಾಗೂ ನ್ಯೂನ್‌ಹ್ಯಾಮ್ ಕಾಲೇಜಿನ ಫೆಲೋ ಆಗಿರುವ ಮನಾಲಿಯವರು, ಸಾಮಾಜಿಕ ಚಳವಳಿಗಳು, ಜನಾಂಗೀಯ ಮತ್ತು ಲಿಂಗಭೇದದ ಹಿಂಸಾಚಾರ ಮತ್ತು ವಸಾಹತೋತ್ತರ ಅಧ್ಯಯನಗಳ ಮೇಲೆ ಸಾಕಷ್ಟು ಸಂಶೋಧನೆ ನಡೆಸಿರುವುದಾಗಿ ವರದಿ ಹೇಳಿದೆ.