Thursday, 12th December 2024

14ರಂದು ಮೇರಿಲ್ಯಾಂಡ್‌ನಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ

ಮೇರಿಲ್ಯಾಂಡ್‌: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ ಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ. ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸ್ಥಾಪಿಸ ಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ.

ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆಯು ಮೇರಿಲ್ಯಾಂಡ್‌ನ ಅಕೋಕೀಕ್ ನಗರದಲ್ಲಿ 13 ಎಕರೆ ಭೂಮಿಯಲ್ಲಿ ನಿರ್ಮಿಸಲಾಗು ತ್ತಿರುವ ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದ ಭಾಗವಾಗಿದೆ.

ಏಪ್ರಿಲ್ 14, 1891 ರಂದು ಜನಿಸಿದ ಡಾ ಭೀಮ್ ರಾವ್ ಅಂಬೇಡ್ಕರ್ ಅವರು ಅನುಯಾಯಿಗಳಲ್ಲಿ ಬಾಬಾ ಸಾಹೇಬ್ ಎಂದು ಜನಪ್ರಿಯರಾಗಿದ್ದರು.

ಸ್ವಾತಂತ್ರ್ಯದ ನಂತರ ಅವರು ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊದಲ ಕ್ಯಾಬಿನೆಟ್‌ನಲ್ಲಿ ಕಾನೂನು ಮತ್ತು ನ್ಯಾಯ ಸಚಿವರಾಗಿದ್ದರು.