Saturday, 14th December 2024

ಸುಲಾವೇಸಿ ದ್ವೀಪದಲ್ಲಿ ಪ್ರಬಲ ಭೂಕಂಪ: ಮೂರು ಸಾವು

ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲಾವೇಸಿ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಆಸ್ಪತ್ರೆ ಕುಸಿದು ಬಿದ್ದಿದ್ದು ಹಲವು ಮಂದಿ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿ, ಮೂವರು ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಆಸ್ಪತ್ರೆ ಸಂಪೂರ್ಣವಾಗಿ ಕುಸಿದು ಬಿದ್ದಿರುವು ದಾಗಿ ಮಾಮುಜು ನಗರದ ರಕ್ಷಣಾ ಏಜೆನ್ಸಿ ಏರಿಯಾನಾಟೋ ತಿಳಿಸಿದೆ.

ಆಸ್ಪತ್ರೆಯ ಅವಶೇಷಗಳಡಿ ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ. ಘಟನೆಯಲ್ಲಿ ಎಷ್ಟು ಮಂದಿ ರೋಗಿಗಳು ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಬಗ್ಗೆ ಯಾವುದೇ ಅಧಿಕೃತ ಅಂಕಿ ಅಂಶ ನೀಡಿಲ್ಲ ಎಂದು ವರದಿ ತಿಳಿಸಿದೆ.