Sunday, 15th December 2024

ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಕರಾಚಿ: ಹೈದರಾಬಾದ್ ಇಂಡಿಗೋ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ ತಾಂತ್ರಿಕ ದೋಷವಿದೆ ಎಂದು ಪೈಲಟ್ ವರದಿ ಮಾಡಿದ ನಂತರ ಇಂಡಿ ಗೋದ ಶಾರ್ಜಾ-ಹೈದರಾಬಾದ್ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ತಿರುಗಿಸಲಾಯಿತು.

ವಿಮಾನಯಾನ ಸಂಸ್ಥೆಯು ಕರಾಚಿಗೆ ಮತ್ತೊಂದು ವಿಮಾನ ಕಳುಹಿಸಲು ಯೋಜಿಸು ತ್ತಿದೆ. 2 ವಾರಗಳಲ್ಲಿ ಕರಾಚಿಯಲ್ಲಿ ಲ್ಯಾಂಡಿಂಗ್ ಮಾಡಿದ ಎರಡನೇ ಭಾರತೀಯ ವಿಮಾನಯಾನ ಸಂಸ್ಥೆ ಇದಾಗಿದೆ.

ಶಾರ್ಜಾ-ಹೈದರಾಬಾದ್ ವಿಮಾನದ ಪೈಲಟ್ ವಿಮಾನದಲ್ಲಿ ತಾಂತ್ರಿಕ ದೋಷ ಗಮನಿಸಿದ ನಂತರ, ಮುನ್ನೆಚ್ಚರಿಕೆಯಾಗಿ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ತಿರುಗಿಸಲಾಯಿತು. ಪ್ರಯಾಣಿಕರನ್ನು ಹೈದರಾಬಾದ್‌ ಗೆ ಕರೆತರಲು ಹೆಚ್ಚುವರಿ ವಿಮಾನವನ್ನು ಕರಾಚಿಗೆ ಕಳುಹಿಸಲಾಗುತ್ತಿದೆ.