Wednesday, 4th December 2024

Emergency Martial Law: ದ.ಕೊರಿಯಾದಲ್ಲಿ ತುರ್ತು ಮಿಲಿಟರಿ ರೂಲ್‌ ಜಾರಿಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್‌!

South Korea President

ಸಿಯಾಲ್: ದಕ್ಷಿಣ ಕೊರಿಯಾದ (South Korea President) ಅಧ್ಯಕ್ಷ ಯುನ್ ಸುಕ್ ಯೋಲ್, ತಾವು ಜಾರಿಗೊಳಿಸಿದ್ದ ಸೇನಾಡಳಿತವನ್ನು(Emergency Martial Law) ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ. ಮಂಗಳವಾರ ದೇಶದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಮತ್ತು ಮಿಲಿಟರಿ ಆಡಳಿತವನ್ನು ಘೋಷಿಸಲಾಗಿತ್ತು. ಯುನ್ ಸುಕ್-ಯೋಲ್ (Yoon Suk Yeol) ಅವರ ಈ ಘೋಷಣೆಯ ನಂತರ, ದಕ್ಷಿಣ ಕೊರಿಯಾದ ಶಾಸಕರು ಈ ಕಾನೂನನ್ನು ಬಲವಾಗಿ ವಿರೋಧಿಸಿದ್ದರು. ಇದೀಗ ಬುಧವಾರ ಬೆಳಗ್ಗೆ ಸೇನಾಡಳಿತ ವಾಪಸ್‌ ತೆಗೆದುಕೊಳ್ಳಲಾಗಿದೆ.

ಅಧ್ಯಕ್ಷ ಸುಕ್-ಯೋಲ್ ಮಂಗಳವಾರ ರಾತ್ರಿ ಈ ಆದೇಶ ಹೊರಡಿಸಿ ಘೋಷಿಸಿದ್ದರು. ಯುನ್ ಸುಕ್-ಯೋಲ್ ಅವರ ಘೋಷಣೆಯ ನಂತರ, ದಕ್ಷಿಣ ಕೊರಿಯಾದ ಶಾಸಕರು ಸಮರ ಕಾನೂನನ್ನು ಬಲವಾಗಿ ವಿರೋಧಿಸಿದ್ದರು. ಹಲವು ಕಡೆ ಅಧ್ಯಕ್ಷರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲಾಗಿತ್ತು. ಅಧ್ಯಕ್ಷರ ನಿರ್ಧಾರವನ್ನು ಖಂಡಿಸಲು ರಾಷ್ಟ್ರೀಯ ಅಸೆಂಬ್ಲಿಯ ಮಧ್ಯರಾತ್ರಿಯ ಅಧಿವೇಶನದಲ್ಲಿ ಕೊರಿಯಾದ ಸಂಸದರು ಸಮರ ಕಾನೂನನ್ನು ಹೇರುವುದರ ವಿರುದ್ಧ ಸರ್ವಾನುಮತದಿಂದ ಮತ ಚಲಾಯಿಸಿದ್ದಾರೆ.

ಸೇನಾಡಳಿತ ಜಾರಿ ಆದೇಶದಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಎದುರಾಗಲಿದೆ. ತಕ್ಷಣ ಈ ಆದೇಶವನ್ನು ಹಿಂಪಡೆಯುವಂತೆ ಸಂಪುಟ ಸಚಿವರು ಯೂನ್‌ ಸುಕ್‌ ಯೋಲ್‌ ಮೇಲೆ ಒತ್ತಡ ಹೇರಿದ್ದರು. ಇದೀಗ ಸುಕ್ ಯೋಲ್‌ ಅವರು ಸಚಿವರ ಒತ್ತಡಕ್ಕೆ ಮಣಿದು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳಿಂದ ಎದುರಾಗಿರುವ ಬೆದರಿಕೆಯಿಂದ ಸ್ವತಂತ್ರ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ದೇಶ ವಿರೋಧಿ ಶಕ್ತಿಗಳನ್ನು ನಿವಾರಿಸಲು ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಸೇನಾಡಳಿತ ಜಾರಿ’ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ಎಮರ್ಜೆನ್ಸಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೆಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಈ ಸುದ್ದಿಯನ್ನೂ ಓದಿ : Viral Video: ವಿಮಾನದ ಎಮರ್ಜೆನ್ಸಿ ಡೋರ್‌ ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು? ವಿಡಿಯೊ ಇದೆ