ಏ.1ರಂದು, ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಭುಗಿ ಲೆದ್ದಿದ್ದರಿಂದ ಅಧ್ಯಕ್ಷ ರಾಜಪಕ್ಸ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು. ಏಪ್ರಿಲ್ 3 ರಂದು ಬೃಹತ್ ಪ್ರಮಾಣದ ಪ್ರತಿಭಟನೆಗಳನ್ನು ಯೋಜಿಸಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಾಗಿ ಈ ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಲಾಗಿತ್ತು.
ನಂತರ, ಕರ್ಫ್ಯೂ ಮತ್ತು ತುರ್ತು ಪರಿಸ್ಥಿತಿಯ ಹೊರತಾಗಿಯೂ ಪ್ರತಿಭಟನೆಗಳು ಮುಂದುವರಿದಿದ್ದವು, ಆಡಳಿತ ಪಕ್ಷದ ಹಿರಿಯ ನಾಯಕರ ಮನೆ ಗಳನ್ನು ಸುತ್ತುವರಿದಿದ್ದ ಪ್ರತಿಭಟನಾಕಾರರು ಆರ್ಥಿಕ ಬಿಕ್ಕಟ್ಟಿನ ಪರಿಹಾರಕ್ಕಾಗಿ ಸರ್ಕಾರವನ್ನು ಒತ್ತಾಯಿಸಿದ್ದರು.
ಆದರೆ, ರಾಜಪಕ್ಸ ಅವರು ವಿದೇಶಿ ವಿನಿಮಯ ಬಿಕ್ಕಟ್ಟು ನಮ್ಮ ನಿರ್ಧಾರಗಳಿಂದ ಆದದ್ದಲ್ಲ. ಕೊರೊನಾದಿಂದ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಆದಾಯ ಮತ್ತು ಆಂತರಿಕ ಹಣದ ವಹಿವಾಟು ಕುಸಿದಿದೆ ಎಂದು ಹೇಳಿದ್ದರು.