ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ranil Wickremesinghe: ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಬಂಧನ

ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಸೆಪ್ಟೆಂಬರ್ 2023 ರಲ್ಲಿ ಅವರು ಅಧ್ಯಕ್ಷರಾಗಿದ್ದಾಗ ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಸಮಾರಂಭದಲ್ಲಿ ಭಾಗವಹಿಸಲು ಲಂಡನ್‌ಗೆ ಭೇಟಿ ನೀಡಿದ್ದಕ್ಕಾಗಿ ವಿಚಾರಣೆ ನಡೆಸಿದ ನಂತರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಕೊಲಂಬೋ: ಸರ್ಕಾರಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಅವರನ್ನು ಶುಕ್ರವಾರ ಬಂಧಿಸಲಾಗಿದೆ. ಸೆಪ್ಟೆಂಬರ್ 2023 ರಲ್ಲಿ ಅವರು ಅಧ್ಯಕ್ಷರಾಗಿದ್ದಾಗ ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಸಮಾರಂಭದಲ್ಲಿ ಭಾಗವಹಿಸಲು ಲಂಡನ್‌ಗೆ ಭೇಟಿ ನೀಡಿದ್ದಕ್ಕಾಗಿ ವಿಚಾರಣೆ ನಡೆಸಿದ ನಂತರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಂಧನದ ಬಳಿಕ ಅವರನ್ನು ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು.

ರಾಜ್ಯದ ಸಂಪನ್ಮೂಲಗಳನ್ನು ವೈಯಕ್ತಿಕ ಉದ್ದೇಶಗಳಿಗಾಗಿ ಬಳಸಿಕೊಂಡ ಆರೋಪದ ಮೇಲೆ ಪೊಲೀಸರು ಅವರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. 2023 ರಲ್ಲಿ ಹವಾನಾದಲ್ಲಿ ನಡೆದ G77 ಶೃಂಗಸಭೆಯಲ್ಲಿ ಭಾಗವಹಿಸಿದ್ದ ರನಿಲ್ ವಿಕ್ರಮಸಿಂಘೆ ಅವರು ಲಂಡನ್‌ಗೆ ಹಿಂದಿರುಗುವಾಗ ಅಲ್ಲಿ ತಂಗಿದ್ದರು. ಆ ಸಮಯದಲ್ಲಿ ಅವರು ಮತ್ತು ಅವರ ಪತ್ನಿ ಮೈತ್ರೀ ವೊಲ್ವರ್‌ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಸಮಾರಂಭದಲ್ಲಿ ಭಾಗವಹಿಸಿದ್ದರು. ವಿಕ್ರಮಸಿಂಘೆ ಅವರು ತಮ್ಮ ಪತ್ನಿ ತಮ್ಮ ಪ್ರಯಾಣ ವೆಚ್ಚವನ್ನು ತಾವೇ ಭರಿಸಿಕೊಂಡಿದ್ದಾರೆ ಮತ್ತು ಯಾವುದೇ ರಾಜ್ಯ ನಿಧಿಯನ್ನು ಬಳಸಲಾಗಿಲ್ಲ ಎಂದು ವಾದಿಸಿದ್ದರು.

ಆದಾಗ್ಯೂ, ವಿಕ್ರಮಸಿಂಘೆ ಅವರು ಖಾಸಗಿ ಪ್ರವಾಸಕ್ಕಾಗಿ ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆ ಮತ್ತು ರಾಜ್ಯವು ಅವರ ಅಂಗರಕ್ಷಕರಿಗೂ ಹಣ ನೀಡಿದೆ ಎಂದು ಪೊಲೀಸರ ಅಪರಾಧ ತನಿಖಾ ಇಲಾಖೆ ಆರೋಪಿಸಿದೆ. ಪ್ರಕರಣದ ಕುರಿತು ಹೇಳಿಕೆ ನೀಡಲು ಶುಕ್ರವಾರ ಬೆಳಿಗ್ಗೆ ಅವರನ್ನು ಸಮನ್ಸ್ ಜಾರಿ ಮಾಡಲಾಯಿತು, ನಂತರ ಬಂಧಿಸಲಾಗಿದೆ. ದೇಶದ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಆಫ್ ಪೊಲೀಸ್, ಅವರು ಖಾಸಗಿ ಭೇಟಿಯ ಪ್ರಯಾಣ ವೆಚ್ಚವನ್ನು ಪೂರೈಸಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದೆ. ಅಷ್ಟೇ ಅಲ್ಲದೆ, ಅವರ ಅಂಗರಕ್ಷಕರಿಗೆ ಇನ್ನೂ ಕೂಡ ದೇಶದ ಖಜಾನೆಯಿಂದ ಸಂಬಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Mahesh Shetty Thimarodi: ಮಹೇಶ್‌ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ; ನಿಷೇಧಾಜ್ಞೆ ಜಾರಿ

ಶ್ರೀಲಂಕಾದ ಆರ್ಥಿಕ ಕುಸಿತದ ನಂತರ ಆರ್ಥಿಕತೆಯನ್ನು ಸ್ಥಿರಗೊಳಿಸಿದ ಕೀರ್ತಿ ವಿಕ್ರಮಸಿಂಘೆ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ಎರಡನೇ ಸುತ್ತಿನವರೆಗೂ ನಡೆದ ತೀವ್ರ ಪೈಪೋಟಿಯಲ್ಲಿ ವಿಕ್ರಮಸಿಂಘೆ ಅವರು ಎಡಪಂಥೀಯ ಎ.ಕೆ. ದಿಸಾನಾಯಕೆ ವಿರುದ್ಧ ಮರುಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು.