ಎಲ್ಲೆಡೆ ದಟ್ಟ ಹೊಗೆಯಾಡುತ್ತಿದ್ದು, ಬೆಂಕಿ ಬೆಂಕಿ ಎಂದು ಕೂಗಿದರು. ಅನೇಕ ಮಂದಿ ಹೃದಯಾಘಾತ ದಿಂದಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಹೆಚ್ಚಿನ ಮಂದಿ ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ಎಂದು ಒಸಾಕಾ ನಗರದ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಅಕಿರಾ ತಿಳಿಸಿ ದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕಟ್ಟಡದಲ್ಲಿ ಕ್ಲಿನಿಕ್, ಪುಸ್ತಕದ ಮಳಿಗೆಗಳು ಇದ್ದವು. ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ.