Friday, 22nd November 2024

ಕ್ಯಾಲಿಫೋರ್ನಿಯಾ ಕಾಳ್ಗಿಚ್ಚಿಗೆ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮ

ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚಿನಿಂದಾಗಿ ಸಾವಿರಾರು ಎಕರೆ ಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಅಲ್ಲಿದ್ದಂತಹ ಜನರನ್ನು ಸ್ಥಳಾಂತರ ಮಾಡಲಾಗಿದೆ.

ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದ ಬಳಿ ಶುಕ್ರವಾರ ಸಂಭವಿಸಿದ ಬೆಂಕಿಯನ್ನು ನಂದಿಸಲು 17 ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಳ್ಳ ಲಾಗಿದ್ದು, 2,000 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸ ಲಾಗಿದೆ.

ಬೆಂಕಿಯ ಜ್ವಾಲೆಗೆ ಈಗಾಗಲೇ 14,200 ಎಕರೆ (5,750 ಹೆಕ್ಟೇರ್) ಗಿಂತ ಹೆಚ್ಚು ನಾಶವಾಗಿದೆ. ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ಇನ್ನು ಸಮೀಪದಲ್ಲಿದ್ದ ಸುಮಾರು 6,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸ ಲಾಗಿದೆ.

ಕ್ಯಾಲಿಫೋರ್ನಿಯಾ ಗವರ್ನರ್ ಗೇವಿನ್ ನ್ಯೂಸಮ್ ಶನಿವಾರ ಮಾರಿಪೋಸಾ ಕೌಂಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿ ದ್ದಾರೆ. ಇತ್ತೀಚಿನ ವರ್ಷಗಳಲ್ಲಿ, ಕ್ಯಾಲಿಫೋರ್ನಿಯಾ ಮತ್ತು ಪಶ್ಚಿಮ ಯುನೈಟೆಡ್ ಸ್ಟೇಟ್ಸ್‌ನ ಇತರ ಭಾಗಗಳು ಬೃಹತ್ ಮತ್ತು ವೇಗವಾಗಿ ಚಲಿಸುವ ಕಾಳ್ಗಿಚ್ಚುಗಳಿಂದ ಧ್ವಂಸಗೊಂಡಿವೆ.