ಟೆಲ್ ಅವೀವ್, ಸೆ. 30: ದುಬೈಯಿಂದ ಇಸ್ರೇಲ್‌ನ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ FZ1073 ವಿಮಾನದಲ್ಲಿ ಬುಧವಾರ ಭಾರಿ ಆತಂಕಕಾರಿ ಘಟನೆ ನಡೆದಿದೆ. ವಿಮಾನದಲ್ಲಿದ್ದ ಒಬ್ಬ ಪೈಲಟ್ ಮತ್ತೊಬ್ಬ ಪೈಲಟ್‌ಗೆ ಚಾಕುವಿನಿಂದ ಇರಿದು, ವಿಮಾನವನ್ನು ಪತನಗೊಳಿಸಲು ಯತ್ನಿಸಿದ್ದಾನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ. ಅದಾಗ್ಯೂ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ 180ಕ್ಕೂ ಹೆಚ್ಚು ಪ್ರಯಾಣಿಕ ಜೀವ ಉಳಿಸಿದ್ದು, ವಿಮಾನವನ್ನು ಸುರಕ್ಷಿತವಾಗಿ ಇಳಿಸಿದ್ದಾರೆ.
180ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ವಿಮಾನವು ಹಾರಾಟದ ವೇಳೆ ಏಕಾಏಕಿ ಸಾವಿರಾರು ಅಡಿ ಕೆಳಕ್ಕೆ ಇಳಿದಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಕಾಕ್‌ಪಿಟ್‌ಗೆ ತೆರಳಿ ಆರೋಪಿ ಪೈಲಟ್‌ನನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ವಿಮಾನದಲ್ಲಿದ್ದ ಇತರ ಪೈಲಟ್‌ಗಳು ಬಳಿಕ ನಿಯಂತ್ರಣ ಪಡೆದುಕೊಂಡು ವಿಮಾನವನ್ನು ಸುರಕ್ಷಿತವಾಗಿ ಸೌದಿ ಅರೇಬಿಯಾದ ತಬೂಕ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ.
ಸುರಕ್ಷಿತವಾಗಿ ಇಳಿದ ಫ್ಲೈದುಬೈ ವಿಮಾನದ ಪ್ರಯಾಣಿಕರು:
ಘಟನೆಯಲ್ಲಿ ಇಬ್ಬರೂ ಪೈಲಟ್‌ಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಸ್ರೇಲ್ ಪ್ರಧಾನಿ ನೆತನ್ಯಾಹು, ಆರೋಪಿ ಪೈಲಟ್‌ನನ್ನು ಸೌದಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯನ್ನು ಮುಂಬೈ ದಾಳಿಯ ಅಪರಾಧಿ ಉಗ್ರ ಅಜ್ಮಲ್ ಕಸಬ್‌ಗೆ ಹೋಲಿಸಿದ ವಾಯುಪಡೆ ಮಾಜಿ ಅಧಿಕಾರಿ
ವಿಮಾನದಲ್ಲಿದ್ದ ಪ್ರಯಾಣಿಕರ ಸಮಯೋಚಿತ ಮಧ್ಯಪ್ರವೇಶದಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ನೆತನ್ಯಾಹು ಹೇಳಿದ್ದಾರೆ. ಆದರೆ ಘಟನೆಯ ಹಿಂದಿನ ನಿಖರ ಕಾರಣ ಅಥವಾ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಫ್ಲೈದುಬೈ ಕೂಡ ವಿಮಾನದಲ್ಲಿ ಘಟನೆ ನಡೆದಿರುವುದನ್ನು ದೃಢಪಡಿಸಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ. ತನಿಖೆ ಮುಂದುವರಿದಿದೆ.