Thursday, 19th September 2024

Oman Accident: ಒಮನ್‌ನಲ್ಲಿ ಭೀಕರ ರಸ್ತೆ ಅಪಘಾತ; ಗೋಕಾಕ್‌ ಮೂಲದ ಕುಟುಂಬ ಸಜೀವ ದಹನ

Oman Accident

ಹೈಮಾ: ಒಮನ್‌ನಲ್ಲಿ ಭೀಕರ ಕಾರು ಅಪಘಾತ(Oman Accident) ಸಂಭವಿಸಿದ್ದು, ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ(Burnt Alive)ಗೊಂಡಿದ್ದಾರೆ. ಹೈಮಾದ ವಿಲಾಯಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ಗೋಕಾಕ್‌ ಮೂಲದ ನಾಲ್ವರು ಸಜೀವದಹನವಾಗಿದ್ದು, ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಲಾರಿ ಮತ್ತು ಕಾರು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ತಕ್ಷಣ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ನೋಡನೋಡ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ಇನ್ನು ಕಾರಿನಲ್ಲಿದ್ದ ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಬೆಂಕಿಗಾಹುತಿಯಾಗಿದ್ದಾರೆ. ಇನ್ನು ಇವರು ದುಬೈನಿಂದ ಒಮನ್‌ಗೆ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ನಾಲ್ವರು ಓಮಾನ್​ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಮೂಲಕ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಬಿ ಕಡಾಡಿ ತಿಳಿಸಿದ್ದಾರೆ.

https://x.com/Irannakadadi_MP/status/1829400087111282739

ಈರಣ್ಣ ಬಿ ಕಡಾಡಿ ಟ್ವಿಟ್ಟರ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿ, ಓಮಾನ್‌ನ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗೋಕಾಕ ನಗರದ ತಹಶೀಲ್ದಾರ ಕುಟುಂಬದ ನಾಲ್ಕು ಜನರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು.ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ… ಎಂದು ಬರೆದುಕೊಂಡಿದ್ದಾರೆ.