Friday, 22nd November 2024

ಗಾಂಧಿ ಪ್ರತಿಮೆ ಅಪವಿತ್ರ: ಭಾರತ ಆಕ್ರೋಶ

ಒಟ್ಟಾವಾ: ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಿದ ಬಗ್ಗೆ ವಿಧ್ವಂಸಕ ಕೃತ್ಯದ ತನಿಖೆ ಗಾಗಿ ಭಾರತವು ಬುಧವಾರ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಯೋಂಗ್ ಸ್ಟ್ರೀಟ್ ಮತ್ತು ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರ ದಲ್ಲಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೆನಡಾದ ಬ್ರಾಡ್‌ ಕಾಸ್ಟಿಂಗ್ ಕಾರ್ಪೊರೇಷನ್ ಯಾರ್ಕ್ ಉಲ್ಲೇಖಿಸಿ ವರದಿ ಮಾಡಿದೆ.

‘ರಿಚ್‌ಮಂಡ್ ಹಿಲ್‌ನಲ್ಲಿರುವ ವಿಷ್ಣು ದೇವಸ್ಥಾನದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ನಮಗೆ ದುಃಖ ತಂದಿದೆ. ಈ ಕ್ರಿಮಿ ನಲ್, ದ್ವೇಷಪೂರಿತ ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದೆ. ಈ ಅಪರಾಧದ ತನಿಖೆಗಾಗಿ ನಾವು ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಟೊರೊಂಟೊ ದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಟ್ವೀಟ್ ಮಾಡಿದ್ದಾರೆ.

ಭಾರತೀಯ ಸಮುದಾಯದಲ್ಲಿ ಆತಂಕ ಮತ್ತು ಅಭದ್ರತೆ ಹೆಚ್ಚಿಸಿದೆ. ತನಿಖೆ ನಡೆಸಲು ಮತ್ತು ಅಪರಾಧಿಗಳನ್ನು ತ್ವರಿತವಾಗಿ ನ್ಯಾಯಾಂಗಕ್ಕೆ ತರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವನ್ನು ಸಂಪರ್ಕಿಸಿದ್ದೇವೆ ಎಂದು ಹೈಕಮಿಷನ್ ಟ್ವೀಟ್‌ನಲ್ಲಿ ತಿಳಿಸಿದೆ.