Friday, 20th September 2024

ಎರಡು ಹೆಲಿಕಾಪ್ಟರ್ ಗಳ ಪರಸ್ಪರ ಡಿಕ್ಕಿ: 10 ಮಂದಿ ಸಾವು

ಪೆರಾಕ್ : ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ.

ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ.