ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bangladesh Row: ಬಾಂಗ್ಲಾದಲ್ಲಿ ಧರ್ಮಾಂಧರ ಅಟ್ಟಹಾಸ; ಹಿಂದೂ ಯುವಕನ್ನು ಥಳಿಸಿ, ಸುಟ್ಟು ಹಾಕಿದ ಪಾಪಿಗಳು

Anti-India Protests In Bangla: ಕೆಲ ದಿನಗಳಿಂದ ತಣ್ಣಗಿದ್ದ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮೈಮೆನ್ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲ್ಲಾದಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ನಡೆದ ಗುಂಪು ಹಲ್ಲೆಯಲ್ಲಿ ಹಿಂದೂ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಹಿಂದೂ ಯುವಕನ್ನು ಥಳಿಸಿ, ಸುಟ್ಟು ಹಾಕಿದ ಪಾಪಿಗಳು

ಸಾಂಧರ್ಬಿಕ ಚಿತ್ರ -

Vishakha Bhat
Vishakha Bhat Dec 19, 2025 3:18 PM

ಢಾಕಾ: ಕೆಲ ದಿನಗಳಿಂದ ತಣ್ಣಗಿದ್ದ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮೈಮೆನ್ಸಿಂಗ್ ಜಿಲ್ಲೆಯ ಭಾಲುಕಾ ಉಪಜಿಲ್ಲಾದಲ್ಲಿ ಇಸ್ಲಾಂ ಧರ್ಮವನ್ನು (Anti-India Protests In Bangla) ಅವಮಾನಿಸಿದ ಆರೋಪದ ಮೇಲೆ ನಡೆದ ಗುಂಪು ಹಲ್ಲೆಯಲ್ಲಿ ಹಿಂದೂ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಪ್ರತಿಭಟನಾಕಾರರು 30 ವರ್ಷದ ದೀಪು ಚಂದ್ರ ದಾಸ್ ಅವರ ಮೃತದೇಹಕ್ಕೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ ದಂಗೆಯ ಪ್ರಮುಖ ನಾಯಕ ಷರೀಫ್ ಉಸ್ಮಾನ್ ಹಾದಿ ಮರಣದ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದವು.

ಮೃತ ದೀಪು ಚಂದ್ರ ದಾಸ್, ಭಲುಕಾ ಉಪ ಜಿಲ್ಲೆಯ ದುಬಾಲಿಯಾ ಪಾರಾ ಪ್ರದೇಶದಲ್ಲಿ ಜವಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕೊಲೆ ಮಾಡಿದ ಬಳಿಕ ಮರಕ್ಕೆ ಕಟ್ಟಿ ಹಾಕಿ ದೇಹಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಶವವನ್ನು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮೈಮೆನ್ಸಿಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ.

ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಹಿಂದೂ ವ್ಯಕ್ತಿಯ ಹತ್ಯೆಯನ್ನು ಬಲವಾಗಿ ಖಂಡಿಸಿದೆ. ಹೊಸ ಬಾಂಗ್ಲಾದೇಶದಲ್ಲಿ ಅಂತಹ ಹಿಂಸಾಚಾರಕ್ಕೆ ಸ್ಥಳವಿಲ್ಲ ಎಂದು ಸರ್ಕಾರ ಹೇಳಿದ್ದು, ಘೋರ ಅಪರಾಧಕ್ಕೆ ಕಾರಣರಾದವರನ್ನು ಬಿಡುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಾದಿ ಸಾವಿನ ಸುದ್ದಿಯ ನಂತರ ಪ್ರತಿಭಟನೆಗಳು ಭುಗಿಲೆದ್ದ ಕಾರಣ, ಪ್ರೋಥೋಮ್ ಅಲೋ, ದಿ ಡೈಲಿ ಸ್ಟಾರ್ ಮತ್ತು ನ್ಯೂ ಏಜ್ ಪತ್ರಿಕೆಗಳ ಪತ್ರಕರ್ತರ ಕಚೇರಿಗಳನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಯಿತು. ದಿ ಡೈಲಿ ಸ್ಟಾರ್ ಕಚೇರಿಗೆ ಸೈನಿಕರನ್ನು ನಿಯೋಜಿಸಲಾಯಿತು ಮತ್ತು ಕಟ್ಟಡದೊಳಗೆ ಸಿಲುಕಿದ್ದ ಪತ್ರಕರ್ತರನ್ನು ಅಗ್ನಿಶಾಮಕ ದಳದವರು ರಕ್ಷಿಸಿದರು. ರಾಜ್‌ಶಾಹಿಯಲ್ಲಿರುವ ಅವಾಮಿ ಲೀಗ್ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಗಳು ತಿಳಿಸಿವೆ.

ಷರೀಫ್ ಉಸ್ಮಾನ್ ಹಾದಿ ಅವರ ಮರಣದ ನಂತರ ಬಾಂಗ್ಲಾದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಸಮಯದಲ್ಲಿ ಈ ಘಟನೆ ನಡೆದಿದೆ . ಪ್ರತಿಭಟನಾಕಾರರು ಪತ್ರಿಕಾ ಕಚೇರಿಗಳು, ಅವಾಮಿ ಲೀಗ್ ನಾಯಕರ ಮನೆಗಳು ಮತ್ತು ಐತಿಹಾಸಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿಯೂ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಯಿತು ಮತ್ತು ಭಾರತೀಯ ರಾಜತಾಂತ್ರಿಕ ಆವರಣಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಬಾಂಗ್ಲಾದೇಶ ನಾಯಕರ ಪ್ರಚೋದನಕಾರಿ ಹೇಳಿಕೆ; ಢಾಕಾದಲ್ಲಿ ವೀಸಾ ಅರ್ಜಿ ಕೇಂದ್ರ ಮುಚ್ಚಿದ ಭಾರತ

ಷರೀಫ್ ಉಸ್ಮಾನ್ ಹಾದಿ ಕಳೆದ ವರ್ಷ ವಿದ್ಯಾರ್ಥಿ ದಂಗೆಯಿಂದ ಹೊರಹೊಮ್ಮಿದ ವಿದ್ಯಾರ್ಥಿ ನಾಯಕರಾಗಿದ್ದು, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಇಳಿಸಲು ಇವರ ಪಾತ್ರ ಪ್ರಮುಖವಾಗಿತ್ತು. ಕಳೆದ ಶುಕ್ರವಾರ ಢಾಕಾದಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾಗ ಮುಸುಕುಧಾರಿ ದುಷ್ಕರ್ಮಿಗಳು ಹಾದಿ ಅವರ ತಲೆಗೆ ಗುಂಡು ಹಾರಿಸಿದ್ದರು. ಆರಂಭದಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು, ನಂತರ ಸುಧಾರಿತ ವೈದ್ಯಕೀಯ ಆರೈಕೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು.