Sunday, 15th December 2024

ಹಾಲಿವುಡ್ ನಟ, ಇಬ್ಬರು ಪುತ್ರಿಯರು ವಿಮಾನ ಅಪಘಾತದಲ್ಲಿ ಸಾವು

ಲಾಸ್ ಎಂಜಲೀಸ್: ಹಾಲಿವುಡ್ ನಟ ಕ್ರಿಶ್ಚಿಯನ್ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರು ಖಾಸಗಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತು ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಟೇಕ್ ಆಫ್ ಆದ ನಂತರ ಕೆರಿಬಿಯನ್ ಸಮುದ್ರಕ್ಕೆ ಅಪ್ಪಳಿಸಿತು.

ಕ್ರಿಶ್ಚಿಯ ಆಲಿವರ್ (51), ಅವರ ಪುತ್ರಿಯರಾದ ಮಡಿತಾ (10), ಅನ್ನಿಕ್ (12) ಮತ್ತು ಪೈಲಟ್ ರಾಬರ್ಟ್ ಸ್ಯಾಚ್ಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕೆರಿಬಿಯನ್ ಸಮುದ್ರದಲ್ಲಿ ಮೀನುಗಾರರು ಮತ್ತು ಕೋಸ್ಟ್ ಗಾರ್ಡ್ ತಕ್ಷಣ ಸ್ಥಳಕ್ಕೆ ತೆರಳಿ ನಾಲ್ಕು ಮೃತದೇಹಗಳನ್ನು ಹೊರತೆಗೆದರು.

ಗ್ರೆನಡೈನ್ಸ್‌ನ ಸಣ್ಣ ದ್ವೀಪ ಬೆಕ್ವಿಯಾದಿಂದ ಸೇಂಟ್ ಲೂಸಿಯಾಕ್ಕೆ ತೆರಳುತ್ತಿದ್ದ ವಿಮಾನವು ಸಮುದ್ರಕ್ಕೆ ಪತನಗೊಂಡಿದೆ. ಆಲಿವರ್ ಅವರ ಕುಟುಂಬ ಪ್ರವಾಸಕ್ಕೆ ಹೋಗುತ್ತಿದ್ದಾಗ ವಿಮಾನ ಅಪಘಾತ ಸಂಭವಿಸಿದೆ.

ಆಲಿವರ್, ಕ್ರಿಶ್ಚಿಯನ್ ಕ್ಲೆಪ್ಸರ್‌ನಲ್ಲಿ ಜನಿಸಿದರು. 60 ಕ್ಕೂ ಹೆಚ್ಚು ಚಲನಚಿತ್ರ ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ.