Donald Trump: ನಾನೇ ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು, ಬಡಾಯಿ ಕೊಚ್ಚಿಕೊಳ್ಳುವ ಟ್ರಂಪ್; ಮೋದಿ ಸ್ಪಷ್ಟನೆ ಬಳಿಕವೂ ನಿಲ್ಲದ ಹೇಳಿಕೆ
ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Donald Trump) ಅವರೊಂದಿಗೆ ಆಪರೇಷನ್ ಸಿಂದೂರ್ ಕುರಿತು ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೆ ತನ್ನ ಚಾಳಿಯನ್ನು ಮುಂದುವರಿಸಿದ್ದಾರೆ. (Narendra Modi) ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುತ್ತಾ, ಅವರನ್ನು ಅದ್ಭುತ ವ್ಯಕ್ತಿ ಎಂದು ಕರೆದರು.


ವಾಷಿಂಗ್ಟನ್: ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Donald Trump) ಅವರೊಂದಿಗೆ ಆಪರೇಷನ್ ಸಿಂದೂರ್ ಕುರಿತು ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಮತ್ತೆ ತನ್ನ ಚಾಳಿಯನ್ನು ಮುಂದುವರಿಸಿದ್ದಾರೆ. (Narendra Modi) ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳುತ್ತಾ, ಅವರನ್ನು ಅದ್ಭುತ ವ್ಯಕ್ತಿ ಎಂದು ಕರೆದರು. ಪ್ರಧಾನಿ ಮೋದಿ ಅವರೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದಾಗಿ ಅವರು ಹೇಳಿಕೊಂಡಿದ್ದಾರೆ. ಪಾಕಿಸ್ತಾನವನ್ನು ಪ್ರೀತಿಸುವುದಾಗಿಯೂ ಅವರು ಹೇಳಿದ್ದಾರೆ. ನಾನು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದೆ. ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಮೋದಿ ಒಬ್ಬ ಅದ್ಭುತ ವ್ಯಕ್ತಿ. ನಾನು ನಿನ್ನೆ ರಾತ್ರಿ ಅವರೊಂದಿಗೆ ಮಾತನಾಡಿದೆ. ನಾವು ಈಗ ಅವರೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಹುದು. ಉಭಯ ದೇಶಗಳು ನಾನು ಹೇಳಿದ ಮಾತಿಗೆ ಬೆಲೆ ಕೊಟ್ಟು ಕದನ ವಿರಾಮವನ್ನು ಘೋಷಿಸಿವೆ ಎಂದು ಅವರು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ನಾಲ್ಕು ದಿನಗಳ ಮಿಲಿಟರಿ ಸಂಘರ್ಷವನ್ನು ನಿಲ್ಲಿಸಲು ತಮ್ಮ ಪಾಲ್ಗೊಳ್ಳುವಿಕೆ ಸಹಾಯ ಮಾಡಿದೆ ಎಂದು ಟ್ರಂಪ್ ಪದೇ ಪದೇ ಹೇಳಿಕೊಂಡಿದ್ದಾರೆ. ಆದರೆ, ಭಾರತ ಅವರ ಹೇಳಿಕೆಗಳನ್ನು ನಿರಾಕರಿಸಿತು ಮತ್ತು ಯಾವುದೇ ಅಮೆರಿಕದ ಸಹಾಯವಿಲ್ಲದೆ ಎರಡೂ ದೇಶಗಳ ಮಿಲಿಟರಿಗಳ ನಡುವೆ ನೇರವಾಗಿ ಕದನ ವಿರಾಮವನ್ನು ಏರ್ಪಡಿಸಲಾಗಿದೆ ಎಂದು ಹೇಳಿದೆ.
ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಸಂಬಂಧಿಸಿದಂತೆ ಭಾರತದ ನಿಲುವನ್ನು ನಿನ್ನೆ ನಡೆದ ಮಾತುಕತೆಯಲ್ಲಿ ಪ್ರಧಾನಿ ಮೋದಿ ಟ್ರಂಪಗೆ ಸ್ಪಷ್ಟವಾಗಿ ತಿಳಿಸಿದ್ದರು. ಸುಮಾರು 35 ನಿಮಿಷಗಳ ಕಾಲ ಟ್ರಂಪ್ ಜೊತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿಯಲ್ಲಿ ಮಾತನಾಡಿದ್ದರು. ಇದೀಗ ಟ್ರಂಪ್ ಮತ್ತೆ ತನ್ನ ಹಳೇ ಚಾಳಿಯನ್ನು ಪ್ರಾರಂಭಿಸಿದ್ದಾರೆ.
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ಟ್ರಂಪ್ ಶ್ವೇತಭವನದ ಕ್ಯಾಬಿನೆಟ್ ರೂಂನಲ್ಲಿ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ಭಾರತ-ಪಾಕಿಸ್ತಾನ ಮಿಲಿಟರಿ ಉದ್ವಿಗ್ನತೆ ಮತ್ತು ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷದ ನಂತರ ಈ ಔತಣಕೂಟದಲ್ಲಿ ಭಾಗವಹಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Narendra Modi: ನಾವು ಉಗ್ರರನ್ನು ಮಾತ್ರ ಹೊಡೆದಿದ್ದೇವೆ; ಆಪರೇಷನ್ ಸಿಂದೂರ್ ಕುರಿತು ಟ್ರಂಪ್ಗೆ ಮಾಹಿತಿ ನೀಡಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಉಭಯ ದೇಶದ ನಾಯಕರು 35 ನಿಮಿಷಗಳ ಕಾಲ ಮಾತನಾಡಿದರು ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಕರೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಆಪರೇಷನ್ ಸಿಂದೂರ್ದ ಕುರಿತು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಭಾರತ ಹಾಗೂ ಪಾಕ್ ನಡುವೆ ಕದನ ವಿರಾಮ ಘೋಷಣೆ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.