Friday, 13th December 2024

ಮಾಜಿ ಪ್ರಧಾನಿ ಇಮ್ರಾನ್ ಖಾನ್’ಗೆ ಬಿಗ್ ರಿಲೀಫ್

ಇಸ್ಲಾಮಾಬಾದ್: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, 14 ವರ್ಷಗಳ ಜೈಲು ಶಿಕ್ಷೆಗೆ ಕೋರ್ಟ್ ತಡೆ ನೀಡಿದೆ.

ಸರ್ಕಾರಿ ಉಡುಗೊರೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿಗೆ ವಿಧಿಸಿದ್ದ ಶಿಕ್ಷೆ ಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ಅಮಾನತುಗೊಳಿಸಿದೆ ಎಂದು ವರದಿ ತಿಳಿಸಿದೆ.

ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರಿಗೆ ಉತ್ತರದಾಯಿತ್ವ ನ್ಯಾಯಾಲಯವು 14 ವರ್ಷಗಳ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಇಮ್ರಾನ್ ಖಾನ್ ಕೋರ್ಟ್ ಮೊರೆ ಹೋಗಿದ್ದರು.

ಹಾಗೂ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ಶಿಕ್ಷೆಯನ್ನು ನ್ಯಾಯಾಲಯ ಅಮಾನತುಗೊಳಿಸಿದೆ. ಶಿಕ್ಷೆಯ ವಿರುದ್ಧದ ಮೇಲ್ಮನವಿಯನ್ನು ಈದ್ ರಜಾದಿನಗಳ ನಂತರ ವಿಚಾರಣೆಗೆ ನಿಗದಿಪಡಿಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ಹೇಳಿದರು.