Friday, 13th December 2024

ಇಮ್ರಾನ್ ಖಾನ್ ದೋಷಿ: ಮೂರು ವರ್ಷ ಜೈಲು ಶಿಕ್ಷೆ

ರಾಚಿ: ಪಾಕಿಸ್ತಾನದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಸುಪ್ರಿಂಕೋರ್ಟ್‌ ಶನಿವಾರ ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿದ್ದು, ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನ ನ್ಯಾಯಾಲಯ ಶನಿವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಅಧಿಕಾರದಲ್ಲಿದ್ದಾಗ ದುಬಾರಿ ಸರ್ಕಾರಿ ಉಡುಗೊರೆಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ ಹೈಕೋರ್ಟ್ ಶುಕ್ರವಾರ ತಳ್ಳಿಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.