ರಿಯಾದ್, ಅ. 11: ಇರಾನ್‌ನ ಬೆಂಬಲವಿರುವ ಯೆಮೆನ್ ಮೂಲದ ಹೌತಿ ಬಂಡುಕೋರರ ಗುಂಪು (Houthis Attack) ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳ ಮೇಲೆ ದಾಳಿ ಮುಂದುವರಿಸಿದೆ. ಶನಿವಾರ (ಅಕ್ಟೋಬರ್ 10) ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆಸಿದ ಭೀಕರ ಆಕ್ರಮಣಕ್ಕೆ ಓರ್ವ ಭಾರತೀಯ ಸೇರಿ 13 ಮಂದಿ ಬಲಿಯಾಗಿದ್ದಾರೆ (Riyadh Airport Attack). ಈ ಬಗ್ಗೆ ಭಾರತೀಯ ರಾಯಭಾರ ಕಚೇರಿ ಎಕ್ಸ್‌ನಲ್ಲಿ ಮಾಹಿತಿ ನಿಡಿದೆ. ʼʼಶನಿವಾರ ನಡೆದ ಭೀಕರ ದಾಳಿಯಿಂದ ಗಾಯಗೊಂಡಿದ್ದ ಭಾರತೀಯರ ಪೈಕಿ ಓರ್ವ ಭಾನುವಾರ ಮೃತಪಟ್ಟಿದ್ದಾರೆʼʼ ಎಂದು ತಿಳಿಸಿದೆ.
ಮೃತ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ರಾಯಭಾರ ಕಚೇರಿ ತಿಳಿಸಿದೆ. "ರಿಯಾದ್‌ನಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಭಾರತೀಯ ಪ್ರಜೆ ಭಾನುವಾರ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದೇವೆ. ನಾವು ಅವರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಮತ್ತು ಮೃತರ ಪಾರ್ಥಿವ ಶರೀರವನ್ನು ಶೀಘ್ರವಾಗಿ ತಾಯ್ನಾಡಿಗೆ ರವಾನಿಸಲು ಅಗತ್ಯವಿರುವ ಎಲ್ಲ ರೀತಿಯ ನೆರವನ್ನೂ ನೀಡಲಿದ್ದೇವೆ" ಎಂದು ರಾಯಭಾರ ಕಚೇರಿ ಹೇಳಿದೆ.
ರಿಯಾದ್ ಮೇಲಿನ ದಾಳಿಗೆ ಭಾರತೀಯ ಬಲಿ:
ರಿಯಾದ್‌ನಲ್ಲಿ ಭಾರತೀಯ ಪ್ರಜೆ ಮೃತಪಟ್ಟಿದ್ದಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ, ಮೃತರ ಕುಟುಂಬಕ್ಕೆ ಎಲ್ಲ ನೆರವನ್ನೂ ನೀಡುವುದಾಗಿ ಹೇಳಿದ್ದಾರೆ.
ರಿಯಾದ್ ವಿಮಾನ ನಿಲ್ದಾಣ, ಸೌದಿ ಅರೇಬಿಯಾ ಮೇಲೆ ಹೌತಿ ಬಂಡುಕೋರರ ದಾಳಿ: ಮೂವರು ಬಲಿ
ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೂ ಗಾಯ
ʼʼರಿಯಾದ್ ವಿಮಾನ ನಿಲ್ದಾಣದ ಮೇಲೆ ಶನಿವಾರ ನಡೆದ ದಾಳಿಯಲ್ಲಿ ಮೊಹಮ್ಮದ್ ಯೂಸುಫ್ ಅಲಿ ಎಂಬ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆʼʼ ಎಂದು ಎಐಎಂಐಎಂ (AIMIM) ಮುಖ್ಯಸ್ಥ ಅಸದುದ್ದೀನ್ ಓವೈಸಿ ತಿಳಿಸಿದ್ದಾರೆ. ʼʼಈ ದಾಳಿಯಲ್ಲಿ ಅಲಿ ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅವರಿಗೆ ನೆರವು ನೀಡುವಂತೆ ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಡೆಪ್ಯೂಟಿ ಚೀಫ್ ಆಫ್ ಮಿಷನ್ ಅವರೊಂದಿಗೆ ಮಾತನಾಡಿದ್ದೇನೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಕ್ಷಣವೇ ಮಧ್ಯ ಪ್ರವೇಶಿಸಬೇಕುʼʼ ಎಂದು ಆಗ್ರಹಿಸಿದ್ದಾರೆ.
ಭಾರತದಿಂದ ಖಂಡನೆ
ಈ ಮಧ್ಯೆ ಭಾರತ ರಿಯಾದ್ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯನ್ನು ಶಕ್ತವಾಗಿ ಖಂಡಿಸಿದೆ. ಕೆಲವು ದಿನಗಳಲ್ಲಿ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪದೇ ಪದೆ ನಡೆದ ದಾಳಿಗಳನ್ನು ಖಂಡಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಹೇಳಿಕೆ ಬಿಡುಗಡೆ ಮಾಡಿದೆ. "ಕಳೆದ ಕೆಲವು ದಿನಗಳಲ್ಲಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಗಳನ್ನು, ಅದರಲ್ಲೂ ವಿಶೇಷವಾಗಿ ಅಕ್ಟೋಬರ್ 10ರಂದು ನಡೆದ ಹೇಯ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ಮೃತರ ಕುಟುಂಬಗಳಿಗೆ ನಾವು ಸಂತಾಪ ಸೂಚಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಸಚಿವಾಲಯ ತಿಳಿಸಿದೆ.
ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ಭಾರತ ಕರೆ ನೀಡಿದೆ.
ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿಗಳ ಭೀಕರ ಕ್ಷಿಪಣಿ ದಾಳಿ: 12 ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ
ಈ ಮಧ್ಯೆ ಹೌತಿಗಳು ವಿಮಾನಯಾನ ಸಂಸ್ಥೆಗಳು, ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣದ ಕೆಲಸಗಾರರಿಗೆ ಮತ್ತೆ ಎಚ್ಚರಿಕೆ ನೀಡಿದ್ದಾರೆ. ಮಾರಕ ದಾಳಿಯ ನಂತರ ಸೌದಿ ವಿಮಾನ ನಿಲ್ದಾಣಗಳು ಮತ್ತು ವಾಯುಪ್ರದೇಶವನ್ನು ಬಳದಿರುವಂತೆ ಸೂಚಿಸಿದ್ದಾರೆ.
ವಿದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.