ಓಸ್ಲೋ: 2026ರ ಸಾಲಿನ ಅತ್ಯಂತ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು (Nobel Peace Prize 2026) ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯಶಾಸ್ತ್ರಜ್ಞೆ ಮತ್ತು ವಿಶ್ವಸಂಸ್ಥೆಯ ಮಾಜಿ ಮಾನವ ಹಕ್ಕುಗಳ ಮುಖ್ಯಸ್ಥೆ ನವನೀತಮ್ "ನವಿ" ಪಿಳ್ಳೈ (Navanethem "Navi" Pillay) ಅವರಿಗೆ ಘೋಷಿಸಲಾಗಿದೆ. ನಾರ್ವೇಜಿಯನ್ ನೊಬೆಲ್ ಸಮಿತಿಯ ಅಧ್ಯಕ್ಷರಾದ ಜೋರ್ಗನ್ ವಾಟ್ನೆ ಫ್ರೈಡ್ನೆಸ್ ಅವರು ಓಸ್ಲೋದಲ್ಲಿ ಈ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಜಾಗತಿಕವಾಗಿ ಶಾಂತಿಯನ್ನು ಉತ್ತೇಜಿಸಲು, ಅಂತಾರಾಷ್ಟ್ರೀಯ ಕಾನೂನನ್ನು ಬಲಪಡಿಸಲು ಮತ್ತು ಯುದ್ಧಾಪರಾಧಗಳು ಹಾಗೂ ನರಮೇಧಗಳ ವಿರುದ್ಧ ಜಾಗತಿಕ ಮಟ್ಟದಲ್ಲಿ ನ್ಯಾಯ ಒದಗಿಸಲು ಅವರು ನಡೆಸಿದ ನಿರಂತರ ಹೋರಾಟವನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
2026ರ ಸಾಲಿನ ಅತ್ಯಂತ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಖ್ಯಾತ ನ್ಯಾಯಶಾಸ್ತ್ರಜ್ಞೆ ಮತ್ತು ವಿಶ್ವಸಂಸ್ಥೆಯ ಮಾಜಿ ಮಾನವ ಹಕ್ಕುಗಳ ಮುಖ್ಯಸ್ಥೆ ನವನೀತಮ್ "ನವಿ" ಪಿಳ್ಳೈ ವಹಿಸಿದ್ದರು.
ಯಾರಿವರು?
1941 ರಲ್ಲಿ ದಕ್ಷಿಣ ಆಫ್ರಿಕಾದ ಡರ್ಬನ್ ನಗರದ ಭಾರತೀಯ ಮೂಲದ ಕುಟುಂಬದಲ್ಲಿ ಜನಿಸಿದ ನವಿ ಪಿಳ್ಳೆ ಅವರು, ಅಲ್ಲಿನ ವರ್ಣಭೇದ ನೀತಿ ತಾರತಮ್ಯಕ್ಕೆ ಒಳಗಾಗಿದ್ದರು. ಇವರು 1963 ರಲ್ಲಿ ದಕ್ಷಿಣ ಆಫ್ರಿಕಾದ ನಟಾಲ್ ವಿಶ್ವವಿದ್ಯಾಲಯದಿಂದ ತಮ್ಮ ಕಲಾ ಪದವಿಯನ್ನು ಪೂರ್ಣಗೊಳಿಸಿದರು. 1965 ರಲ್ಲಿ ಕಾನೂನು ಪದವಿಯನ್ನು ಪಡೆದರು. ನಂತರ ಅಮೆರಿಕಾದ ಪ್ರಸಿದ್ಧ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ (Harvard Law School) 1982 ರಲ್ಲಿ ಕಾನೂನು ಸ್ನಾತಕೋತ್ತರ ಪದವಿ ಪಡೆದರು. ಇಲ್ಲಿ ಅವರು ಜಾಗತಿಕ ಮಾನವ ಹಕ್ಕುಗಳು ಮತ್ತು ಅಂತರರಾಷ್ಟ್ರೀಯ ಕಾನೂನಿನ ಕುರಿತು ವಿಶೇಷ ಅಧ್ಯಯನ ನಡೆಸಿದರು.
Nobel Award: ವೈದ್ಯಕೀಯ ಕ್ಷೇತ್ರದಲ್ಲಿ ಮೂವರಿಗೆ ಒಲಿದ ನೊಬೆಲ್; ಇಲ್ಲಿದೆ ನೋಡಿ ಡಿಟೇಲ್ಸ್
ಡರ್ಬನ್ ಪ್ರಾಂತ್ಯದಲ್ಲಿ ಕಾನೂನು ಸಂಸ್ಥೆಯೊಂದನ್ನು ಪ್ರಾರಂಭಿಸಿದ ಮೊದಲ ಕಪ್ಪು ವರ್ಣೀಯ ಮಹಿಳೆ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ರಾಜಕೀಯ ಕೈದಿಗಳ ಪರವಾಗಿ, ವಿಶೇಷವಾಗಿ ಖ್ಯಾತ ನಾಯಕ ನೆಲ್ಸನ್ ಮಂಡೇಲಾ ಸೇರಿದಂತೆ ರೋಬೆನ್ ದ್ವೀಪದಲ್ಲಿದ್ದ ಕೈದಿಗಳ ಹಕ್ಕುಗಳಿಗಾಗಿ ನ್ಯಾಯಾಲಯದಲ್ಲಿ ಧ್ವನಿ ಎತ್ತಿದ್ದರು.
ಇತ್ತೀಚಿನ ವರ್ಷಗಳಲ್ಲಿ ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷದ ಮಾನವ ಹಕ್ಕುಗಳ ಉಲ್ಲಂಘನೆ ತನಿಖಾ ಸಮಿತಿಯ ಮುಖ್ಯಸ್ಥರಾಗಿದ್ದರು. ಪ್ರಸ್ತುತ ಮ್ಯಾನ್ಮಾರ್‌ನ ರೊಹಿಂಗ್ಯಾ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ (ICJ) ತಾತ್ಕಾಲಿಕ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.