Sunday, 15th December 2024

ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ದೂತವಾಸ ಕಚೇರಿಗೆ ಬೆಂಕಿ: ಆಕ್ರೋಶ

ಸ್ಯಾನ್ ಫ್ರಾನ್ಸಿಸ್ಕೋ: ಸ್ಯಾನ್ ಫ್ರಾನ್ಸಿಸ್ಕೋ ನಗರದಲ್ಲಿರುವ ಭಾರತೀಯ ದೂತವಾಸ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದು, ಭಾರತ ಸರ್ಕಾರ ಖಲಿಸ್ತಾನಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.

ದೂತವಾಸ ಕಚೇರಿಗೆ ಬೆಂಕಿ ಹಚ್ಚಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಲಾಗಿದೆ. ಐದು ತಿಂಗಳ ಹಿಂದೆಯೂ ಭಾರತೀಯ ದೂತವಾಸ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರು.

ಖಲಿಸ್ತಾನಿ ಮೂಲಭೂತವಾದಿಗಳ ಗುಂಪು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಬೆಂಕಿ ಹಚ್ಚಿದೆ.

ಖಲಿಸ್ತಾನ್ ಬೆಂಬಲಿಗರ ವಿಡಿಯೋ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತ ವಾಸದಲ್ಲಿ ಬೆಂಕಿ ಹಚ್ಚಿದ ಕೃತ್ಯ ತೋರಿಸಿದೆ.

ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ನಿಜ್ಜರ್, ತನ್ನ ತಲೆಯ ಮೇಲೆ 10 ಲಕ್ಷ ರೂಪಾಯಿ ನಗದು ಬಹುಮಾನ ಹೊಂದಿದ್ದು, ಕಳೆದ ತಿಂಗಳು ಕೆನಡಾದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು.

ದೂತವಾಸ ಕಚೇರಿಗೆ ಬೆಂಕಿ ಹಚ್ಚಿದ ಕೃತ್ಯವನ್ನು ಅಮೆರಿಕ ಖಂಡಿಸಿದೆ.