ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಯುಎಇಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯರು ಸೇರಿ 13 ಮಂದಿ ಸಾವು

Bus-Truck Collision: ಯುಎಇಯ ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾರತೀಯ ಪ್ರಜೆಗಳೂ ಸೇರಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ ಎಂದು ದುಬೈಯಲ್ಲಿರುವ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. ದೂತಾವಾಸ ಕಚೇರಿಯು ಮೃತರ ಕುಟುಂಬಗಳನ್ನು ಸಂಪರ್ಕಿಸಿದೆ.

ಯುಎಇಯ ರಸ್ತೆ ಅಪಘಾತ; ಭಾರತೀಯರು ಸೇರಿ 13 ಮಂದಿ ಸಾವು

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole Nov 24, 2026 9:05 PM

ದುಬೈ, ನ. 24: ಯುಎಇಯ ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾರತೀಯ ಪ್ರಜೆಗಳೂ ಸೇರಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ ಎಂದು ದುಬೈಯಲ್ಲಿರುವ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. ದೂತಾವಾಸ ಕಚೇರಿಯು ಮೃತರ ಕುಟುಂಬಗಳನ್ನು ಸಂಪರ್ಕಿಸಿದ್ದು, ನೆರವು ಒದಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ.

"ರಾಸ್ ಅಲ್ ಖೈಮಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತೀಯ ದೂತಾವಾಸ ಕಚೇರಿಯು ಮೃತರ ಕುಟುಂಬಗಳನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ನೆರವು ಮತ್ತು ಬೆಂಬಲವನ್ನು ಒದಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ" ಎಂದು ದುಬೈಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಮೃತರಲ್ಲಿ ಎಷ್ಟು ಮಂದಿ ಭಾರತೀಯರಿದ್ದಾರೆ ಎನ್ನುವ ನುಖರ ಮಾಹಿತಿ ಲಭ್ಯವಾಗಿಲ್ಲ.

ರಾಸ್ ಅಲ್ ಖೈಮಾದ ದಕ್ಷಿಣ ಭಾಗದಲ್ಲಿರುವ ಅಲ್ ವತನ್ ರಸ್ತೆಯಲ್ಲಿ ಪ್ರಯಾಣಿಕರ ಬಸ್ ಮತ್ತು ಟ್ರಕ್ ಪರಸ್ಪರ ಡಿಕ್ಕಿ ಹೊಡೆದಿವೆ ಎಂದು ಯುಎಇ ಗೃಹ ಸಚಿವಾಲಯ ತಿಳಿಸಿದೆ. ನವೆಂಬರ್ 24ರ ಮುಂಜಾನೆ ಈ ಅಪಘಾತ ಸಂಭವಿಸಿದೆ.

16 ಆಂಬ್ಯುಲೆನ್ಸ್‌ಗಳು ಮತ್ತು 5 ತುರ್ತು ಪ್ರತಿಕ್ರಿಯೆ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಅದಿಕಾರಿಗಳು ಹೇಳಿದ್ದಾರೆ. ರಾಷ್ಟ್ರೀಯ ಆಂಬ್ಯುಲೆನ್ಸ್ ಸಿಬ್ಬಂದಿ ಘಟನಾ ಸ್ಥಳದಲ್ಲಿ 26 ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಒದಗಿಸಿದರು. ಆ ಪೈಕಿ 14 ಮಂದಿಯನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ವರದಿಯೊಂದು ತಿಳಿಸಿದೆ.