ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಯುಎಇಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯರು ಸೇರಿ 13 ಮಂದಿ ಸಾವು

Bus-Truck Collision: ಯುಎಇಯ ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾರತೀಯ ಪ್ರಜೆಗಳೂ ಸೇರಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ ಎಂದು ದುಬೈಯಲ್ಲಿರುವ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. ದೂತಾವಾಸ ಕಚೇರಿಯು ಮೃತರ ಕುಟುಂಬಗಳನ್ನು ಸಂಪರ್ಕಿಸಿದೆ.

ಸಾಂದರ್ಭಿಕ ಚಿತ್ರ

ದುಬೈ, ನ. 24: ಯುಎಇಯ ರಾಸ್ ಅಲ್ ಖೈಮಾದಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾರತೀಯ ಪ್ರಜೆಗಳೂ ಸೇರಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ ಎಂದು ದುಬೈಯಲ್ಲಿರುವ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ. ದೂತಾವಾಸ ಕಚೇರಿಯು ಮೃತರ ಕುಟುಂಬಗಳನ್ನು ಸಂಪರ್ಕಿಸಿದ್ದು, ನೆರವು ಒದಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ.

"ರಾಸ್ ಅಲ್ ಖೈಮಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಪ್ರಜೆಗಳು ಸೇರಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತೀಯ ದೂತಾವಾಸ ಕಚೇರಿಯು ಮೃತರ ಕುಟುಂಬಗಳನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ನೆರವು ಮತ್ತು ಬೆಂಬಲವನ್ನು ಒದಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ" ಎಂದು ದುಬೈಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

Ramesh Ballamoole

View all posts by this author