ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಖಮೇನಿ ಹತ್ಯೆಗೆ ಪ್ರತಿಯಾಗಿ ಇಸ್ರೇಲ್ ಮೇಲೆ ಇರಾನ್ ದಾಳಿ, 9 ಸಾವು

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸುವುದಾಗಿ ಘೋಷಣೆ ಮಾಡಿದ್ದ ಇರಾನ್ ಭಾನುವಾರ ಇಸ್ರೇಲ್ ನ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಇದರಿಂದ ಸುಮಾರು 9 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಯುದ್ಧ ಪ್ರಾರಂಭವಾದ ಬಳಿಕ ಇರಾನ್ ನಡೆಸಿದ ಅತ್ಯಂತ ಮಾರಕ ದಾಳಿ ಇದಾಗಿದೆ ಎನ್ನಲಾಗಿದೆ.

ಇಸ್ರೇಲ್ ಮೇಲೆ ಇರಾನ್ ದಾಳಿ: 9 ಸಾವು

ಸಂಗ್ರಹ ಚಿತ್ರ -

ಇಸ್ರೇಲ್: ಯುಎಸ್ ಪಡೆಯೊಂದಿಗೆ ಸೇರಿ ಇಸ್ರೇಲ್ ಟೆಹ್ರಾನ್ ಮೇಲೆ ದಾಳಿ ನಡೆಸಿ ಇರಾನ್‌ನ ಸರ್ವೋಚ್ಚ ನಾಯಕ (Iran Supreme Leader) ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರನ್ನು ಹತ್ಯೆ ಮಾಡಿದ ಬಳಿಕ ಇದಕ್ಕೆ ಪ್ರತೀಕಾರ ತೀರಿಸುವುದಾಗಿ ಇರಾನ್ (Iran attack on Israel) ಘೋಷಿಸಿತ್ತು. ಇದರ ಬೆನ್ನಲ್ಲೇ ಭಾನುವಾರ ಇಸ್ರೇಲ್‌ನ ಬೀಟ್ ಶೆಮೆಶ್ ಮೇಲೆ ಇರಾನ್‌ನ 8 ಹೊಸ ದಾಳಿಗಳನ್ನು ನಡೆಸಿದ್ದು, ಇದರಿಂದ 9ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಮೇಲೆ ಇರಾನ್ ನಡೆಸಿರುವ ಅತ್ಯಂತ ಮಾರಕ ದಾಳಿ ಇದು ಎಂದು ಪರಿಗಣಿಸಲಾಗಿದೆ.

ಖಮೇನಿ ಹತ್ಯೆಗೆ ಪ್ರತಿಯಾಗಿ ಇಸ್ರೇಲ್‌ನ ಬೀಟ್ ಶೆಮೆಶ್ ನಗರದ ಮೇಲೆ ಭಾನುವಾರ ಇರಾನ್ ಕ್ಷಿಪಣಿ ದಾಳಿಯನ್ನು ನಡೆಸಿದೆ. ಇದರಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇದು ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಪ್ರಾರಂಭವಾದ ಮೇಲೆ ದೇಶದಲ್ಲಿ ನಡೆದ ಅತ್ಯಂತ ಮಾರಕ ದಾಳಿ ಎಂದು ಸ್ಥಳೀಯರು ಹೇಳಿದ್ದಾರೆ.

ಚುನಾವಣಾ ಸೋಲಿನ 10 ವರ್ಷಗಳ ಅನಂತರ ಇರಾನ್‌ನ ಮಧ್ಯಂತರ ಪರಮೋಚ್ಛ ನಾಯಕನಾದ ಅಲಿರೆಜಾ ಅರಾಫಿ; ಏನಿವರ ಹಿನ್ನೆಲೆ?

ಈ ಕುರಿತು ಪ್ರತಿಕ್ರಿಯಿಸಿರುವ ಮ್ಯಾಗೆನ್ ಡೇವಿಡ್ ಆಡಮ್ ತುರ್ತು ಸೇವೆ, ಬೀಟ್ ಶೆಮೆಶ್ ಪ್ರದೇಶದಲ್ಲಿ ಒಂಬತ್ತು ಜನರ ಸಾವಾಗಿದೆ. 28 ಜನರು ಗಾಯಗೊಂಡಿದ್ದಾರೆ. ಇದು ಕಟ್ಟಡದ ಮೇಲೆ ನಡೆದಿರುವ ನೇರ ದಾಳಿಯಾಗಿದೆ. ಈ ಸ್ಥಳದಲ್ಲಿ ೧೨ಕ್ಕೂ ಹೆಚ್ಚು ಇಸ್ರೇಲಿ ರಕ್ಷಣಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.

ಖಮೇನಿ ನಿಧನಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಸಂತಾಪ; ಅಮೆರಿಕ-ಇಸ್ರೇಲ್ ವಿರುದ್ಧ ವಾಗ್ದಾಳಿ

ಕ್ಷಿಪಣಿ ದಾಳಿಯ ಪರಿಣಾಮ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರನ್ನು ಪತ್ತೆಹಚ್ಚಲು ವಿವಿಧ ರೀತಿಯ ಉಪಕರಣಗಳನ್ನು ಬಳಸುತ್ತಿದ್ದಾರೆ. ಇನ್ನೂ ಅನೇಕರು ಕಟ್ಟಡದ ಕೆಳಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಟೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ಶನಿವಾರ ಬೆಳಗ್ಗೆ ನಡೆಸಿದ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಖಮೇನಿ ಅವರ ಮಗಳು, ಮೊಮ್ಮಗಳು, ಸೊಸೆ ಮತ್ತು ಅಳಿಯ ಸೇರಿದಂತೆ ಅವರ ಕುಟುಂಬದ ಹಲವಾರು ಸದಸ್ಯರು ಸಾವನ್ನಪ್ಪಿದ್ದಾರೆ. ಇರಾನ್‌ನ ರಕ್ಷಣಾ ಸಚಿವ ಅಜೀಜ್ ನಾಸಿರ್ಜಾದೆ ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಕಮಾಂಡರ್ ಮೊಹಮ್ಮದ್ ಪಕ್‌ಪೌರ್ ಕೂಡ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯ ಬಳಿಕ ಇದಕ್ಕೆ ಪ್ರತೀಕಾರ ತೀರಿಸುವುದಾಗಿ ಇರಾನ್ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಅದು ಇಸ್ರೇಲ್‌ನ ಬೀಟ್ ಶೆಮೆಶ್ ಮೇಲೆ ಇರಾನ್‌ನ 8 ಹೊಸ ದಾಳಿಗಳನ್ನು ನಡೆಸಿದೆ.