ಟ್ರಂಪ್ ಬೆದರಿಕೆಗೆ ಬಗ್ಗದ ಇರಾನ್; ಶಾಂತಿ ಮಾತುಕತೆ ಮಧ್ಯೆಯೇ ವಾಕ್‌ಔಟ್
ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಭಾನುವಾರ ಆರಂಭವಾದ ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ಶಾಂತಿ ಮಾತುಕತೆಯಲ್ಲಿ ನಾಟಕೀಯ ಬೆಳವಣಿಗೆಗಳು ಸಂಭವಿಸಿವೆ. ಮಧ್ಯಪ್ರಾಚ್ಯದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಮುಂದುವರಿದಿದ್ದ ಉದ್ವಿಗ್ನತೆ ಮತ್ತು ಸಂಘರ್ಷಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಯೋಜಿಸಲಾದ ಈ ಮಾತುಕತೆ ಇದೀಗ ಬೇರೆ ತಿರುವು ಪಡೆದುಕೊಂಡಿದೆ.
ಸಂಗ್ರಹ ಚಿತ್ರ -
ಜಿನಿವಾ: ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಭಾನುವಾರ ಆರಂಭವಾದ ಅಮೆರಿಕ ಮತ್ತು ಇರಾನ್ (Iran- America) ನಡುವಿನ ಮಹತ್ವದ ಶಾಂತಿ ಮಾತುಕತೆಯಲ್ಲಿ ನಾಟಕೀಯ ಬೆಳವಣಿಗೆಗಳು ಸಂಭವಿಸಿವೆ. ಮಧ್ಯಪ್ರಾಚ್ಯದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಮುಂದುವರಿದಿದ್ದ ಉದ್ವಿಗ್ನತೆ ಮತ್ತು ಸಂಘರ್ಷಗಳಿಗೆ ಶಾಶ್ವತ (Donald Trump) ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಯೋಜಿಸಲಾದ ಈ ಮಾತುಕತೆ, ಲೆಬನಾನ್‌ನಲ್ಲಿನ ಕದನ ವಿರಾಮದ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯಗಳು ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ಹೇಳಿಕೆಗಳಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮಾತುಕತೆ ಪ್ರಾರಂಭವಾಗುವ ಮೊದಲು ಆಯೋಜಕರು ಮತ್ತು ಅಮೆರಿಕದ ನಿಯೋಗದ ಸದಸ್ಯರು ಎರಡೂ ಕಡೆಯವರ ನಡುವೆ ಹ್ಯಾಂಡ್‌ಶೇಕ್ ಮತ್ತು ಜಂಟಿ ಫೋಟೋ ಸೆಷನ್ ಅನ್ನು ಯೋಜಿಸಿದ್ದರು. ಆದಾಗ್ಯೂ, ಇರಾನಿನ ಮುಖ್ಯ ಸಮಾಲೋಚಕ ಮೊಹಮ್ಮದ್ ಬಘರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಭಾಗವಹಿಸಲು ನಿರಾಕರಿಸಿ ಅಲ್ಲಿಂದ ತೆರಳಿದರು. ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ಅಮೆರಿಕ ನಿಯೋಗ ಹಾಗೂ ಇರಾನ್ ಸಂಸತ್ ಸ್ಪೀಕರ್ ಮತ್ತು ಮುಖ್ಯ ಸಂಧಾನಕಾರ ಮೊಹಮ್ಮದ್ ಬಾಘರ್ ಖಾಲಿಬಾಫ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗ ಈ ಮಾತುಕತೆಯಲ್ಲಿ ಭಾಗವಹಿಸಿದ್ದವು.
ಮಾತುಕತೆ ಆರಂಭಕ್ಕೂ ಮುನ್ನವೇ ಇರಾನ್ ತನ್ನ ನಿಲುವನ್ನು ಸ್ಪಷ್ಟಪಡಿಸಿತ್ತು. ಮಧ್ಯಂತರ ಒಪ್ಪಂದದ ಪ್ರಮುಖ ಅಂಶಗಳಲ್ಲಿ ಒಂದಾದ "ಎಲ್ಲಾ ಕದನರಂಗಗಳಲ್ಲಿ ಕದನ ವಿರಾಮ" ಸಂಪೂರ್ಣ ಜಾರಿಗೆ ಬರಬೇಕು ಎಂದು ಒತ್ತಾಯಿಸಿತ್ತು. ವಿಶೇಷವಾಗಿ ಲೆಬನಾನ್‌ನಲ್ಲಿ ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯ ನಡುವೆ ನಡೆಯುತ್ತಿರುವ ದಾಳಿಗಳು ನಿಲ್ಲದಿದ್ದರೆ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.
ಲೆಬನಾನ್ ಯುದ್ಧ ನಿಲ್ಲದಿದ್ದರೆ ಅಣು ಕಾರ್ಯಕ್ರಮ, ನಿರ್ಬಂಧ ಸಡಿಲಿಕೆ ಅಥವಾ ಇತರ ರಾಜತಾಂತ್ರಿಕ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಇರಾನ್ ಸಂಧಾನ ತಂಡದ ಸದಸ್ಯರು ಸ್ಪಷ್ಟಪಡಿಸಿದ್ದಾರೆ. ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳನ್ನು ಸಡಿಲಿಸುವುದು, ಇರಾನ್‌ನ ತೈಲ ರಫ್ತಿಗೆ ಅನುಮತಿ ನೀಡುವುದು, ವಿದೇಶಗಳಲ್ಲಿ ಸ್ಥಗಿತಗೊಂಡಿರುವ ಇರಾನ್‌ನ ಬಿಲಿಯನ್‌ಗಟ್ಟಲೆ ಡಾಲರ್ ಮೌಲ್ಯದ ಆಸ್ತಿಗಳನ್ನು ಬಿಡುಗಡೆ ಮಾಡುವುದು ಹಾಗೂ ಭದ್ರತಾ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ.
''ನನ್ನ ಜನಪ್ರಿಯತೆ ಬಗ್ಗೆ ನೀವು ಚಿಂತಿಸಬೇಡಿ'': ಡೊನಾಲ್ಡ್ ಟ್ರಂಪ್‌ಗೆ ಜಾರ್ಜಿಯಾ ಮೆಲೋನಿ ತಿರುಗೇಟು
ಮಾತುಕತೆ ನಡೆಯುಯುತ್ತಿರುವಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಇರಾನ್‌ನ ಸಂಪೂರ್ಣ ನಿಲುವನ್ನು ಬದಲಾಯಿಸಿದೆ. ಲೆಬನಾನ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇರಾನ್ ಬೆಂಬಲಿತ ಸಂಘಟನೆಗಳು ತಮ್ಮ ಚಟುವಟಿಕೆಗಳನ್ನು ನಿಲ್ಲಿಸದಿದ್ದರೆ ಕಠಿಣ ಸೇನಾ ಕ್ರಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಇರಾನ್ ಈ ನಿರ್ಧಾರವನ್ನು ಬಲವಾಗಿ ಖಂಡಿಸಿ ಶಾಂತಿ ಮಾತುಕತೆಯಿಂದ ಹೊರ ನಡೆದಿದೆ.