ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Labour Day 2026: ಕರ್ನಾಟಕ ಸಂಘ ಕತಾರ್‌ನಿಂದ ದೋಹಾದಲ್ಲಿ ಸಂಭ್ರಮದಿಂದ ಕಾರ್ಮಿಕ ದಿನ 2026 ಆಚರಣೆ

ಕತಾರ್‌ನ ದೋಹಾದಲ್ಲಿ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ಹಲವು ಕಾರ್ಮಿಕರಿಗೆ ICBF ಜೀವವಿಮೆ ಸೌಲಭ್ಯವನ್ನು ವಿತರಿಸಲಾಯಿತು. ಬೇಸಿಗೆಗಾಗಿ ಕೋಲ್ಡ್ ವಾಟರ್ ಉಳಿಸುವ ಕೂಲರ್ ಬಾಟಲ್‌ಗಳನ್ನು ಆಗಮಿಸಿದ್ದ ಎಲ್ಲಾ ಕಾರ್ಮಿಕರಿಗೆ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಮಿಕರನ್ನು ಆಕರ್ಷಿಸಿ ಮನೋರಂಜನೆ ನೀಡಿದವು.

ದೋಹಾದಲ್ಲಿ ಸಂಭ್ರಮದಿಂದ ಕಾರ್ಮಿಕರ ದಿನ 2026 ಆಚರಣೆ

ದೋಹಾದಲ್ಲಿ ಕರ್ನಾಟಕ ಸಂಘ ಕತಾರ್‌ನಿಂದ ಕಾರ್ಮಿಕ ದಿನ ಆಚರಣೆ. -

Prabhakara R
Prabhakara R May 3, 2026 7:21 PM

ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ ಮೇ 1ರಂದು ಶುಕ್ರವಾರ, ದೋಹಾದ ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಅದ್ಧೂರಿಯಾಗಿ ʼಕಾರ್ಮಿಕ ದಿನ 2026ʼ ಆಚರಿಸಲಾಯಿತು. “ಕಾಯಕವೇ ಕೈಲಾಸ” ಎಂಬ ವಿಷಯದೊಂದಿಗೆ ನಡೆದ ಈ ಕಾರ್ಯಕ್ರಮ ಕಾರ್ಮಿಕರು, ಗಣ್ಯರು ಹಾಗೂ ಸಮುದಾಯವನ್ನು ಒಗ್ಗೂಡಿಸಿತು.ಇದು ಕರ್ನಾಟಕ ಸಂಘದ ನೂತನ ಆಡಳಿತ ಸಮಿತಿಯ ಪ್ರಪ್ರಥಮ ಕಾರ್ಯಕ್ರಮವಾಗಿದ್ದು, ಎಲ್ಲರಿಂದ ಪ್ರಶಂಸೆಗೆ ಪಾತ್ರವಾಯಿತು.

Karnataka Sangha Qatar

ಕರ್ನಾಟಕ ಸಂಘದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರು ಸ್ವಾಗತ ಭಾಷಣದಲ್ಲಿ, “ಕರ್ನಾಟಕ ಸಂಘವು ಕಾರ್ಮಿಕರಿಗೆ ಸ್ವಗೃಹದಂತಿರುವ ಸಂಘ” ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಡಾ. ವೈಭವ್ ತಾಂಡಲೆ, ಭಾರತೀಯ ದೂತಾವಾಸ ಕಾರ್ಯಾಲಯದ ರಾಯಭಾರಿ ಚಟುವಟಿಕೆಗಳ ಮುಖ್ಯಸ್ಥರು, ಖಾಲಿದ್ ಅಬ್ದುಲ್ ರಹ್ಮಾನ್ ಫಖ್ರೂ, ಕಾರ್ಮಿಕ ಸಚಿವಾಲಯ, ಕತಾರ್, ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ಅಧ್ಯಕ್ಷ ಮಣಿಕಂಟನ್ ಎ.ಪಿ., ಐಸಿಸಿ ಸಲಹಾ ಸಮಿತಿ ಅಧ್ಯಕ್ಷ ಪಿ ಎನ್ ಬಾಬುರಾಜನ್ ಹಾಗೂ ಫೈಸಲ್ ಅಲ್ ಹುಡಾವಿ ಕಾರ್ಯಕ್ರಮವನ್ನು ಪ್ರಶಂಸಿಸಿ, ಕಾರ್ಮಿಕರ ಕೊಡುಗೆ, ಕಲ್ಯಾಣ ಹಾಗೂ ಸುರಕ್ಷತೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

Karnataka Sangha Qatar (1)

ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲು, ಸಮುದಾಯದ ಹಿರಿಯ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಆಗಮಿಸಿದ್ದರು. ಪ್ರಮುಖವಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಹಿತೈಷಿ ವೇದಿಕೆ ಹಾಗೂ ಭಾರತೀಯ ಕ್ರೀಡಾ ಕೇಂದ್ರದ ಮುಖಂಡರು ಉಪಸ್ಥಿತರಿದ್ದರು.

Karnataka Sangha Qatar (2)

ಕರ್ನಾಟಕ ಸಂಘ ಕತಾರಿನ ಸಲಹಾ ಸಮಿತಿಯ ಸದಸ್ಯರು ಹಾಗು ನಿಕಟಪೂರ್ವ ಅಧ್ಯಕ್ಷರಾದ ಅರುಣ್ ಕುಮಾರ್, ವೀರೇಶ್ ಮನ್ನಂಗಿ, ಎಚ್.ಕೆ. ಮಧು ಹಾಗೂ ಸಂಜಯ್ ಕುದುರಿ, ಹಾಗೂ ಭಾರತೀಯ ಸಾಂಸ್ಕೃತಿಕ ಕೇಂದ್ರದ ಮಾಜಿ ಅಧ್ಯಕ್ಷೆ ಮಿಲನ್ ಅರುಣ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡಿಗರ ಪ್ರತಿನಿಧಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆಡಳಿತ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಸಂದೀಪ್ ರೆಡ್ಡಿ ಅವರು, ಹಾಗೂ ಕರ್ನಾಟಕ ಮೂಲದ ಸಹೋದರ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು ಈ ಕಾರ್ಯಕ್ರಮಕ್ಕೆ ಆಗಮಿಸಿ, ಸಕ್ರೀಯವಾಗಿ ಪಾಲ್ಗೊಂಡು, ಕರ್ನಾಟಕ ಸಂಘ ಕತಾರಿನ ಒಗ್ಗಟ್ಟನ್ನು ಎತ್ತಿ ಹಿಡಿದರು.

Karnataka Sangha Qatar (3)

ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಣಿಭಾರತಿಯವರ ಮುಂದಾಳತ್ವದಲ್ಲಿ ಹಲವು ಕಾರ್ಮಿಕರಿಗೆ ICBF ಜೀವವಿಮೆ ಸೌಲಭ್ಯವನ್ನು ವಿತರಿಸಲಾಯಿತು ಹಾಗೂ ಬೇಸಿಗೆಗಾಗಿ ಕೋಲ್ಡ್ ವಾಟರ್ ಉಳಿಸುವ ಕೂಲರ್ ಬಾಟಲ್‌ಗಳನ್ನು ಆಗಮಿಸಿದ್ದ ಎಲ್ಲಾ ಕಾರ್ಮಿಕರಿಗೆ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಮಿಕರನ್ನು ಆಕರ್ಷಿಸಿ ಮನೋರಂಜನೆ ನೀಡಿತು.

ಡಾ. ಕಾಂತರಾಜ್ ಅವರು ಆರೋಗ್ಯದ ಬಗ್ಗೆ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಿದರು. ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಸುಜಿತ್ ಕುಮಾರ್ ಅವರು ಎಲ್ಲರಿಗೂ ಧನ್ಯವಾದವನ್ನು ತಿಳಿಸಿ ವಂದನಾರ್ಪಣೆ ಸಲ್ಲಿಸಿದರು. ಕೇಕ್ ಕತ್ತರಿಸಿ ಸಿಹಿ ಹಂಚಿದ ನಂತರ ಭೋಜನ ವಿತರಿಸಿ ಕಾರ್ಯಕ್ರಮ ಸಮಾರೋಪಗೊಂಡಿತು.

ಕರ್ನಾಟಕ ಸಂಘ ಕತಾರ್ ಕೃತಜ್ಞತೆ

ಕರ್ನಾಟಕ ಸಂಘ ಕತಾರ್, ಭಾರತೀಯ ದೂತಾವಾಸ, ದೋಹಾ ಹಾಗೂ ಭಾರತೀಯ ಸಾಂಸ್ಕೃತಿಕ ಕೇಂದ್ರ, ಕತಾರ್ ಅವರ ನಿರಂತರ ಹಾಗೂ ಸ್ಥಿರ ಬೆಂಬಲಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಈ ಕಾರ್ಯಕ್ರಮದ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿದ ಬೆಂಬಲದಾರರಾದ ಥಾಮಸ್ ಚೆರಿಯನ್ (ನಾಸರ್ ಬಿನ್ ಖಾಲಿದ್ ಅಂಡ್ ಸನ್ಸ್ ಟ್ರೇಡಿಂಗ್ ಕಂ.), ಶ್ರೀ ಮುಸ್ತಫಾ (ಗಲ್ಫ್ ಪ್ಲಾಂಟ್ ಟ್ರೇಡಿಂಗ್ & ಕಾಂಟ್ರಾಕ್ಟಿಂಗ್ ಡಬ್ಲ್ಯು.ಎಲ್.ಎಲ್.), ಹಾಗೂ ಮೊಹಮ್ಮದ್ ಸಲೀಮ್ (ಟೀಮ್ ಎಂಜಿನಿಯರಿಂಗ್ & ಕಾಂಟ್ರಾಕ್ಟಿಂಗ್ ಡಬ್ಲ್ಯು.ಎಲ್.ಎಲ್.) ಅವರಿಗೆ ಸಂಘ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತದೆ. ತೆಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ರೂಪಿಸಲು ಶ್ರಮಿಸಿದ ಎಲ್ಲಾ ಸ್ವಯಂಸೇವಕರು, ಸದಸ್ಯರು ಹಾಗೂ ಹಿತೈಷಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕರ್ನಾಟಕ ಸಂಘ ತಿಳಿಸಿದೆ.