ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ಯಾಲಿಫೋರ್ನಿಯಾದಲ್ಲಿ ತುಮಕೂರು ಮೂಲದ ವಿದ್ಯಾರ್ಥಿ ನಾಪತ್ತೆ; 5ನೇ ದಿನಕ್ಕೆ ಕಾಲಿಟ್ಟ ಹುಡುಕಾಟ

ಉನ್ನತ ವಿದ್ಯಾಭ್ಯಾಸಕ್ಕಾಗಿ ಅಮೆರಿಕದ ಕ್ಯಾಲಿಫೋರ್ನಿಯಾ ತೆರಳಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಕಳೆದ ಐದು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಸಾಕೇತ್‌ ಶ್ರೀನಿವಾಸಯ್ಯ ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಹೊಂದಿದ್ದ ಬ್ಯಾಗ್‌ ಟಿಲ್ಡೆನ್ ಪ್ರಾದೇಶಿಕ ಉದ್ಯಾನವನದ ಬಳಿಯಿರುವ ನಿವಾಸದ ಬಳಿ ಪತ್ತೆಯಾಗಿದೆ.

ನಾಪತ್ತೆಯಾದ ವಿದ್ಯಾರ್ಥಿ ಸಾಕೇತ್‌

ನವದೆಹಲಿ: ಉನ್ನತ ವಿದ್ಯಾಭ್ಯಾಸಕ್ಕಾಗಿ ಅಮೆರಿಕದ ಕ್ಯಾಲಿಫೋರ್ನಿಯಾ ತೆರಳಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಕಳೆದ ಐದು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. (Missing Case) ಕ್ಯಾಲಿಫೋರ್ನಿಯಾ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಆಣ್ವಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವರ್ಷದ ಸಾಕೇತ್ ಶ್ರೀನಿವಾಸಯ್ಯ ಫೆಬ್ರವರಿ 9 ರಂದು ನಾಪತ್ತೆಯಾಗಿದ್ದ. ಆತನನ್ನು ಕೊನೆಯ ಬಾರಿಗೆ ಕ್ಯಾಂಪಸ್‌ನಿಂದ ಒಂದು ಕಿಲೋಮೀಟರ್ ದೂರದಲ್ಲಿ ನೋಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಕೇತ್‌ ಶ್ರೀನಿವಾಸಯ್ಯ ಅವರ ಪಾಸ್‌ಪೋರ್ಟ್ ಮತ್ತು ಲ್ಯಾಪ್‌ಟಾಪ್ ಹೊಂದಿದ್ದ ಬ್ಯಾಗ್‌ ಟಿಲ್ಡೆನ್ ಪ್ರಾದೇಶಿಕ ಉದ್ಯಾನವನದ ಬಳಿಯಿರುವ ನಿವಾಸದ ಬಳಿ ಪತ್ತೆಯಾಗಿದೆ. ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದ್ದು, ಅನಿವಾಸಿ ಭಾರತೀಯ ಸಂಘ ಮತ್ತು ವಿದೇಶಾಂಗ ಸಚಿವಾಲಯದ ನೆರವು ಕೋರಿದ್ದಾರೆ .ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕಾಣೆಯಾದ ವಿದ್ಯಾರ್ಥಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಅವರ ಕುಟುಂಬ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದೆ.

ಸಾಕೇತ್ ಭಾನುವಾರದವರೆಗೂ ಎಲ್ಲರೊಂದಿಗೂ ಸಂಪರ್ಕದಲ್ಲಿದ್ದ. ಸೋಮವಾರ ರಾತ್ರಿ ತನ್ನ ತಾಯಿಗೆ ಕರೆ ಮಾಡಿದ್ದ. ಆದರೆ, ಈ ಕಡೆಯಿಂದ ತಾಯಿ ವಾಪಸ್ ಕರೆ ಮಾಡಿದಾಗ ಫೋನ್ ಎತ್ತಿರಲಿಲ್ಲ. ನಂತರ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ ಎಂದು ತಿಳಿಸಿದ್ದಾರೆ. 6 ಅಡಿ 1 ಇಂಚು ಎತ್ತರವಿರುವ ಸಾಕೇತ್ ಬಗ್ಗೆ ಯಾವುದೇ ಮಾಹಿತಿ ಸಿಕ್ಕರೂ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಕೇತ್‌ ಅವರು ಬೆಂಗಳೂರಿನ ಶ್ರೀ ವಾಣಿ ಎಜುಕೇಶನ್ ಸೆಂಟರ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಪೂರೈಸಿ, ನಂತರ ಪ್ರತಿಷ್ಠಿತ ಬೇಸ್‌ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಳಿಕ ಚೆನ್ನೈ ಐಐಟಿಯಲ್ಲಿ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಪ್ರಸ್ತುತ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ 'ಪ್ರಾಡಕ್ಟ್ ಡೆವಲಪ್‌ಮೆಂಟ್ ಪ್ರೋಗ್ರಾಮ್' ಅಡಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಅಧ್ಯಯನ ಮಾಡುತ್ತಿದ್ದರು.

ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಾಭರಣಕ್ಕಾಗಿ ಕೊಲೆಯಾದ ಶಂಕೆ

ಸದ್ಯ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿರುವ ಭಾರತೀಯರು ಅವರನ್ನು ಪತ್ತೆಹಚ್ಚಲು ಸಂಘಟಿತ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಅವರ ಕುರಿತು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ.

Vishakha Bhat Heggar

View all posts by this author