Friday, 13th December 2024

ಯಾತ್ರಿಕರ ವೇಷದಲ್ಲಿದ್ದ ಭಿಕ್ಷುಕರ ಬಂಧನ

ಲಾಹೋರ್: ಭಿಕ್ಷಾಟನೆಗಾಗಿ ಗಲ್ಫ್ ದೇಶಗಳಿಗೆ ಪ್ರಯಾಣಿಸಲು ಪ್ರಯತ್ನಿಸುತ್ತಿದ್ದ ಯಾತ್ರಿಕರ ವೇಷದಲ್ಲಿದ್ದ ಹದಿನಾರು ಭಿಕ್ಷುಕ ರನ್ನು ಪಾಕಿಸ್ತಾನದ ಮುಲ್ತಾನ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ವಿಮಾನದಿಂದ ಇಳಿಸಿ ವಶಕ್ಕೆ ಪಡೆಯಲಾಗಿದೆ.

ಒಂದು ಮಗು, 11 ಮಹಿಳೆಯರು ಮತ್ತು ನಾಲ್ವರು ಪುರುಷರು ಸೇರಿದಂತೆ 16 ಜನರನ್ನು ಒಳಗೊಂಡ ಗುಂಪು ಉಮ್ರಾ ವೀಸಾದಲ್ಲಿ ಪ್ರಯಾಣಿಸುತ್ತಿತ್ತು. ಉಮ್ರಾವು ಇಸ್ಲಾಮಿಕ್ ತೀರ್ಥಯಾತ್ರೆಯಾಗಿದ್ದು, ಇದನ್ನು ವರ್ಷದ ಯಾವುದೇ ಸಮಯದಲ್ಲಿ ಕೈಗೊಳ್ಳ ಬಹುದು.

ವಲಸೆ ಅಧಿಕಾರಿಗಳ ಪರಿಶೀಲನೆ ವೇಳೆ ತಾವು ಸೌದಿ ಅರೇಬಿಯಾಕ್ಕೆ ಭಿಕ್ಷೆ ಬೇಡಲು ಹೋಗುತ್ತಿದ್ದೇವೆ ಎಂದು ಪ್ರಯಾಣಿಕರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಿಕ್ಷಾಟನೆಯಿಂದ ಬರುವ ಆದಾಯದಲ್ಲಿ ಅರ್ಧದಷ್ಟು ಹಣವನ್ನು ತಮ್ಮ ಪ್ರಯಾಣದ ವ್ಯವಸ್ಥೆ ಮಾಡಿದ ಏಜೆಂಟರಿಗೆ ನೀಡಬೇಕೆಂದು ಒಪ್ಪಂದವಾಗಿತ್ತು ಎಂದು ತಿಳಿಸಿದ್ದಾರೆ.

ಗಮನಾರ್ಹ ಪ್ರಮಾಣದ ಭಿಕ್ಷುಕರು ಅಕ್ರಮ ಮಾರ್ಗಗಳ ಮೂಲಕ ವಿದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಸಾಗರೋತ್ತರ ಪಾಕಿಸ್ತಾನಿಗಳು ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಅನಿವಾಸಿ ಪಾಕಿಸ್ತಾನಿಗಳ ಸೆನೆಟ್ ಸಮಿತಿಗೆ ವರದಿ ನೀಡಿದ ಒಂದು ದಿನದ ನಂತರ ಈ ಬಂಧನ ಆಗಿದೆ.

‘ಪಾಕಿಸ್ತಾನಿ ಭಿಕ್ಷುಕರು ಜಿಯಾರತ್ (ತೀರ್ಥಯಾತ್ರೆ) ನೆಪದಲ್ಲಿ ಮಧ್ಯಪ್ರಾಚ್ಯಕ್ಕೆ ಪ್ರಯಾಣಿಸುತ್ತಾರೆ.