Friday, 13th December 2024

ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ವಿಸ್ತರಣೆ

ಬ್ರಿಸ್ಬೇನ್: ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಉಲ್ಬಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಬ್ರಿಸ್ಬೇನ್‌ನಲ್ಲಿ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ.

ಕ್ವೀನ್ಸ್‌ಲ್ಯಾಂಡ್ ರಾಜ್ಯದ ಬ್ರಿಸ್ಬೇನ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಲಾಕ್‌ಡೌನ್‌ ಅಂತ್ಯಗೊಳ್ಳಬೇಕಾಗಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ ಡೆಲ್ಟಾ ರೂಪಾಂತರ ತಳಿಯ 13 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅನ್ನು ಭಾನುವಾರದವರೆಗೆ ವಿಸ್ತರಿಸಲಾಗಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ ರಾಜ್ಯದಲ್ಲಿರುವ ಸಿಡ್ನಿ ಮತ್ತು ಸುತ್ತಮುತ್ತಲಿನ ನಗರದಲ್ಲಿ ಈಗಾಗಲೇ ಆರು ವಾರಗಳ ಲಾಕ್‌ಡೌನ್‌ ಹೇರಲಾಗಿದೆ. ನ್ಯೂ ಸೌತ್‌ ವೇಲ್ಸ್‌ನಲ್ಲಿ ಸ್ಥಳೀಯವಾಗಿ ಪ್ರಸರಣಗೊಂಡ 207 ಹೊಸ ಪ್ರಕರಣಗಳು ವರದಿಯಾಗಿವೆ.