Sunday, 15th December 2024

ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ರಾಜೀನಾಮೆ

ಕೊಲಂಬೋ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು, ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಶ್ರೀಲಂಕಾದಲ್ಲಿ ಉಂಟಾಗಿದ್ದ ಆರ್ಥಿಕ ತುರ್ತು ಪರಿಸ್ಥಿತಿಯ ಕಾರಣ, ನಿಯಂತ್ರಣ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡ ಲಾಗಿತ್ತು. ಈ ಬೆನ್ನಲ್ಲೇ, ಜನರಿಂದ ವ್ಯಾಪಕ ಆಕ್ರೋಶ, ಕಿಡಿಗೂ ಕಾರಣವಾಗಿತ್ತು.

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು, ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ಹೇಳಿವೆ. ಈ ಮೂಲಕ ಆರ್ಥಿಕ ಪರಿಸ್ಥಿತಿ ನಿಯಂತ್ರಿಸಲಾಗದಂತ ಪ್ರಧಾನಿ ರಾಜಪಕ್ಸೆ ಅವರು, ಅಧಿಕಾರದಿಂದ ಕೆಳಗಿಳಿದಿದ್ದಾರೆ ಎಂದು ಶ್ರೀಲಂಕಾ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.