Operation Sindoor: ನಾಗರಿಕರ ರಕ್ಷಣೆ ಕುರಿತು ಮಾತನಾಡುವ ಯೋಗ್ಯತೆ ಪಾಕಿಸ್ತಾನಕ್ಕಿಲ್ಲ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಭಾರತ (Operation Sindoor) ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿತು. ನಾಗರಿಕರ ರಕ್ಷಣೆಯ ಕುರಿತ ಚರ್ಚೆಗಳಲ್ಲಿ ಪಾಕಿಸ್ತಾನ ಭಾಗವಹಿಸುವುದನ್ನು "ಅಂತರರಾಷ್ಟ್ರೀಯ ಸಮುದಾಯಕ್ಕೆ ಅವಮಾನ" ಎಂದು ಭಾರತ ಹೇಳಿದೆ. ಪಾಕಿಸ್ತಾನ ನಮ್ಮ ಧಾರ್ಮಿಕ ಸ್ಥಳಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಲು ಪ್ರಯತ್ನಿಸಿತ್ತು ಎಂದು ಭಾರತ ಹೇಳಿದೆ.


ಜಿನೀವಾ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಭಾರತ (Operation Sindoor) ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿತು. ನಾಗರಿಕರ ರಕ್ಷಣೆಯ ಕುರಿತ ಚರ್ಚೆಗಳಲ್ಲಿ ಪಾಕಿಸ್ತಾನ ಭಾಗವಹಿಸುವುದನ್ನು "ಅಂತಾರಾಷ್ಟ್ರೀಯ ಸಮುದಾಯಕ್ಕೆ ಅವಮಾನ" ಎಂದು ಭಾರತ ಹೇಳಿದೆ. ಪಾಕಿಸ್ತಾನದ ಭಯೋತ್ಪಾದನಾ ನೀತಿಯನ್ನು ಖಂಡಿಸಿದ ಭಾರತ ಭಯೋತ್ಪಾದಕರು ಮತ್ತು ನಾಗರಿಕರ ನಡುವೆ ವ್ಯತ್ಯಾಸವನ್ನು ಗುರುತಿಸಲು ವಿಫಲವಾದ ಪಾಕಿಸ್ತಾನಕ್ಕೆ ನಾಗರಿಕ ರಕ್ಷಣೆಯ ಬಗ್ಗೆ ಮಾತನಾಡುವ ನೈತಿಕ ಅಧಿಕಾರವಿಲ್ಲ ಎಂದು ಹೇಳಿದೆ. ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಸೇನೆಯು ಉದ್ದೇಶಪೂರ್ವಕವಾಗಿ ಭಾರತೀಯ ಗಡಿ ಗ್ರಾಮಗಳ ಮೇಲೆ ಶೆಲ್ ದಾಳಿ ನಡೆಸಿ, ನಾಗರಿಕರ ಸಾವಿಗೆ ಕಾರಣವಾಯಿತು ಮತ್ತು ನಮ್ಮ ಧಾರ್ಮಿಕ ಸ್ಥಳಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಲು ಪ್ರಯತ್ನಿಸಿತ್ತು ಎಂದು ಭಾರತ ಹೇಳಿದೆ.
ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಹರೀಶ್ ಪುರಿ ಅವರು ಮಾತನಾಡಿ, ಹಲವಾರು ವಿಷಯಗಳ ಕುರಿತು ಪಾಕಿಸ್ತಾನ ಪ್ರತಿನಿಧಿಯ ಆಧಾರರಹಿತ ಆರೋಪಗಳಿಗೆ ಪ್ರತಿಕ್ರಿಯಿಸಲು ನಾನು ನಿರ್ಬಂಧಿತನಾಗಿದ್ದೇನೆ. ಮೊದಲನೆಯದಾಗಿ, ಭಾರತವು ನಮ್ಮ ಗಡಿಗಳಲ್ಲಿ ದಶಕಗಳಿಂದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಗಳನ್ನು ಎದುರಿಸುತ್ತಿದೆ ಎಂದು ಹೇಳಿದರು. ತಹ ರಾಷ್ಟ್ರವು ನಾಗರಿಕರ ರಕ್ಷಣೆಯ ಚರ್ಚೆಯಲ್ಲಿ ಭಾಗವಹಿಸುವುದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮಾಡಿದ ಅವಮಾನ. ಭಯೋತ್ಪಾದಕರು ಮತ್ತು ನಾಗರಿಕರ ನಡುವೆ ಯಾವುದೇ ವ್ಯತ್ಯಾಸವನ್ನು ಮಾಡದ ರಾಷ್ಟ್ರವು ನಾಗರಿಕರನ್ನು ರಕ್ಷಿಸುವ ಬಗ್ಗೆ ಮಾತನಾಡಲು ಯಾವುದೇ ಅರ್ಹತೆಯನ್ನು ಹೊಂದಿಲ್ಲ" ಎಂದು ಅವರು ಹೇಳಿದರು.
ಇತ್ತೀಚಿನ ಘಟನೆಯೊಂದನ್ನು ಉಲ್ಲೇಖಿಸಿದ ಪುರಿ, ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನಿ ಸೇನೆಯು ಉದ್ದೇಶಪೂರ್ವಕವಾಗಿ ಭಾರತೀಯ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.20 ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದರು ಮತ್ತು 80 ಕ್ಕೂ ಹೆಚ್ಚು ಜನರು ಗಾಯಗೊಂಡರು. ಗುರುದ್ವಾರಗಳು, ದೇವಾಲಯಗಳು ಮತ್ತು ಕಾನ್ವೆಂಟ್‌ಗಳು ಸೇರಿದಂತೆ ಪೂಜಾ ಸ್ಥಳಗಳನ್ನು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗಿತ್ತು. ಈಗ ಪಾಕಿಸ್ತಾನ ನಾಗರಿಕ ರಕ್ಷಣೆಯ ಕುರಿತು ಮಾತನಾಡುತ್ತದೆ ಎಂದು ಅವರು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: India Vs Pakistan: ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಲು ಭಾರತ ಸಜ್ಜು; ಮತ್ತೆ FATFನ ಗ್ರೇ ಪಟ್ಟಿಗೆ ಪಾಕ್ ಅನ್ನು ಸೇರಿಸಲು ತಂತ್ರ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಭಾರತ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿತು. ನಾಗರಿಕರ ರಕ್ಷಣೆಯ ಕುರಿತ ಚರ್ಚೆಗಳಲ್ಲಿ ಪಾಕಿಸ್ತಾನ ಭಾಗವಹಿಸುವುದನ್ನು "ಅಂತಾರಾಷ್ಟ್ರೀಯ ಸಮುದಾಯಕ್ಕೆ ಅವಮಾನ" ಎಂದು ಭಾರತ ಹೇಳಿದೆ. ಪಾಕಿಸ್ತಾನದ ಭಯೋತ್ಪಾದನಾ ನೀತಿಯನ್ನು ಖಂಡಿಸಿದ ಭಾರತ ಭಯೋತ್ಪಾದಕರು ಮತ್ತು ನಾಗರಿಕರ ನಡುವೆ ವ್ಯತ್ಯಾಸವನ್ನು ಗುರುತಿಸಲು ವಿಫಲವಾದ ಪಾಕಿಸ್ತಾನಕ್ಕೆ ನಾಗರಿಕ ರಕ್ಷಣೆಯ ಬಗ್ಗೆ ಮಾತನಾಡುವ ನೈತಿಕ ಅಧಿಕಾರವಿಲ್ಲ ಎಂದು ಹೇಳಿದೆ. ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಸೇನೆಯು ಉದ್ದೇಶಪೂರ್ವಕವಾಗಿ ಭಾರತೀಯ ಗಡಿ ಗ್ರಾಮಗಳ ಮೇಲೆ ಶೆಲ್ ದಾಳಿ ನಡೆಸಿ, ನಾಗರಿಕರ ಸಾವಿಗೆ ಕಾರಣವಾಯಿತು ಮತ್ತು ನಮ್ಮ ಧಾರ್ಮಿಕ ಸ್ಥಳಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಲು ಪ್ರಯತ್ನಿಸಿತ್ತು ಎಂದು ಭಾರತ ಹೇಳಿದೆ.