Saturday, 14th December 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಲಾಲ ಯೂಸುಫ್ ಝಾಯಿ

ಲಂಡನ್: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮತ್ತು ಪಾಕಿಸ್ತಾನದ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸುಫ್ ಝಾಯಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದಾರೆ.

ತಾವು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಸಣ್ಣ ಸಮಾರಂಭದಲ್ಲಿ ವಿವಾಹವಾಗಿದ್ದೇವೆ ಎಂದು ಬಹಿರಂಗಪಡಿಸಿದ್ದಾರೆ.

ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸ್ಸರ್ ಮತ್ತು ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟೆದ್ದೇವೆ. ನಾವು ನಮ್ಮ ಕುಟುಂಬ ಗಳೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭ ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆ ಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು ಬಯಸಿ ದ್ದೇವೆ” ಎಂದು ಬರೆದಿದ್ದಾರೆ.

ನಿಕ್ಕಾ ಸಮಾರಂಭದ ನಾಲ್ಕು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಇದರಲ್ಲಿತಮ್ಮ ಪತಿ ಅಸ್ಸರ್ ಮತ್ತು ಅವರ ಪೋಷಕರು ಜಿಯಾವುದ್ದೀನ್ ಯೂಸುಫ್‌ಜಾಯ್ ಮತ್ತು ತೂರ್ ಪೆಕೈ ಯೂಸುಫ್‌ಜಾಯ್ ಅವರೊಂದಿಗೆ ಪೋಸ್ ನೀಡುವುದನ್ನು ಕಾಣ ಬಹುದು. ವೆಡ್ಡಿಂಗ್ ಡೇಗೆ ಮಲಾಲಾ ಚಿನ್ನದ ಕಸೂತಿಯಿಂದ ಅಲಂಕರಿಸಲ್ಪಟ್ಟ ಗುಲಾಬಿ ಬಣ್ಣದ ಉಡುಪನ್ನು ಧರಿಸಿದ್ದರು. ಹೆಣ್ಣು ಮಕ್ಕಳ ಶಿಕ್ಷಣದ ಕಾರ್ಯಕರ್ತೆ, 24 ವರ್ಷದ ಮಲಾಲ ಯೂಸುಫ್ ಝಾಯಿ ಅವರು ಇತಿಹಾಸದಲ್ಲಿ ಅತ್ಯಂತ ಕಿರಿಯ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿದ್ದಾರೆ.

‘ಮಲಾಲ ಯೂಸಫ್ ಝಾಯಿ’ ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ‘ಸ್ವಾತ್ ಜಿಲ್ಲೆ’ಯ ಮಿಂಗೋರಗ್ರಾಮದ ಒಂದು ಶಾಲೆಯ ವಿದ್ಯಾರ್ಥಿನಿ ಮತ್ತು ಶಿಕ್ಷಣ ಕಾರ್ಯಕರ್ತೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನ್ ಸಂಘಟನೆಯು ನಿಷೇಧಿಸಿರುವ ‘ಸ್ವಾತ್ ಕಣಿವೆ’ಯಲ್ಲಿನ ಹುಡುಗಿಯರ ಶಿಕ್ಷಣ ಮತ್ತು ಮಹಿಳಾ ಹಕ್ಕುಗಳಪರ ತನ್ನ ಕ್ರಿಯಾತ್ಮಕ ಹೋರಾಟಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ. ಇವರಿಗೆ 2003ರಲ್ಲಿ ಮಲಾಲ ಸಖರೊವ್ ಪ್ರೈಜ್ ಫಾರ್ ಫ್ರೀಡಮ್ ಆಫ್ ಥಾಟ್ (ಯೋಚನೆಯ ಸ್ವಾತಂತ್ರ್ಯಕ್ಕೆ ಸಖರೊವ್ ಪ್ರಶಸ್ತಿ) ದೊರಕಿತು.