Sunday, 15th December 2024

ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅವಘಡ: 11 ಜನರು ಸಾವು

ರಾಚಿ: ಪಾಕಿಸ್ತಾನದ ಕರಾಚಿಯ ಬಹುಮಹಡಿ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿಯ ನಂತರ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕರಾಚಿಯ ರಶೀದ್ ಮಿನ್ಹಾಸ್ ರಸ್ತೆಯಲ್ಲಿರುವ ಆರ್‌ಜೆ ಶಾಪಿಂಗ್ ಮಾಲ್‌ನಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳವು ಸುಮಾರು 50 ಜನರನ್ನು ರಕ್ಷಿಸಿದೆ. ಹೆಚ್ಚಿನವರು ಕಟ್ಟಡದೊಳಗೆ ಉಳಿದಿದ್ದಾರೆ ಮತ್ತು ಅವರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ.

“ಬೆಂಕಿ ಕಾಣಿಸಿಕೊಂಡಾಗ, ನಾವು ಸುರಕ್ಷಿತ ಕೊಠಡಿಯತ್ತ ಧಾವಿಸಿ ನಮ್ಮನ್ನು ರಕ್ಷಿಸಿಕೊಂಡಿದ್ದೇವೆ. ಹೊಗೆ ತುಂಬಾ ತೀವ್ರವಾಗಿತ್ತು, ಏನಾಗುತ್ತಿದೆ ಎಂದು ನಮಗೆ ಅರ್ಥವಾಗಲಿಲ್ಲ” ಎಂದು ಅವರು ಹೇಳಿದರು.

ಕರಾಚಿ ಮೇಯರ್ ಮುರ್ತಾಜಾ ವಹಾಬ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ ನಲ್ಲಿ ಸಾವುಗಳನ್ನು ದೃಢಪಡಿಸಿದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿಯಲ್ಲಿ ಗಾಯಗೊಂಡ ಹಲವಾರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.