ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mamata Banerjee: ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ; ಫಲಕ ಹಿಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸದ್ಯ ಲಂಡನ್‌ ಪ್ರವಾಸದಲ್ಲಿದ್ದಾರೆ. ಮಾರ್ಚ್ 27 ರಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಮಯದಲ್ಲಿ ಕೆಲ ವಿದ್ಯಾರ್ಥಿಗಳು ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.ಸಿಪಿಐ(ಎಂ)ನ ಭಾರತೀಯ ವಿದ್ಯಾರ್ಥಿ ಒಕ್ಕೂಟದ ಯುಕೆ ಘಟಕಕ್ಕೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಅವರ ಭಾಷಣದ ಸಮಯದಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿತು

ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ಮಮತಾ ಬ್ಯಾನರ್ಜಿ ಭಾಷಣದ ವೇಳೆ ಗದ್ದಲ

Profile Vishakha Bhat Mar 28, 2025 11:16 AM

ಲಂಡನ್‌: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸದ್ಯ ಲಂಡನ್‌ ಪ್ರವಾಸದಲ್ಲಿದ್ದಾರೆ. ಮಾರ್ಚ್ 27 ರಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಮಯದಲ್ಲಿ ಕೆಲ ವಿದ್ಯಾರ್ಥಿಗಳು ಬ್ಯಾನರ್ಜಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.ಸಿಪಿಐ(ಎಂ)ನ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಯುಕೆ ಘಟಕಕ್ಕೆ ಸೇರಿದ ವಿದ್ಯಾರ್ಥಿಗಳ ಗುಂಪೊಂದು ಅವರ ಭಾಷಣದ ಸಮಯದಲ್ಲಿ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿತು. 2023 ರ ಪಂಚಾಯತ್ ಚುನಾವಣೆಯ ಸಮಯದಲ್ಲಿ ನಡೆದ ಹಿಂಸಾಚಾರ, ತೃಣಮೂಲ ಕಾಂಗ್ರೆಸ್ ನಾಯಕನ ಮಗನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಅತ್ಯಾಚಾರಗಳು ಏಕೆ ಸಂಭವಿಸುತ್ತವೆ ಎಂಬುದರ ಕುರಿತು ಮಮತಾ ಬ್ಯಾನರ್ಜಿ ಅವರಿಗೆ ಪ್ರಶ್ನೆ ಮಾಡಿದ್ದಾರೆ.

1990 ರ ದಶಕದ ಆರಂಭದ ತಮ್ಮ ಹಳೆಯ ಫೋಟೊವನ್ನು ತೋರಿಸಿದರು, ಅದರಲ್ಲಿ ಅವರು ತಲೆಗೆ ಬ್ಯಾಂಡೇಜ್ ಹಾಕಿಕೊಂಡಿದ್ದರು. ತಾವು ವಿರೋಧ ಪಕ್ಷದಲ್ಲಿದ್ದಾಗ ತಮ್ಮನ್ನು ಕೊಲ್ಲಲು ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಕೆಲವರು ಅವರಿಗೆ ಪ್ರಶ್ನೆಗಳನ್ನು ಕೇಳಿದರು. ಇಲ್ಲಿ ರಾಜಕೀಯ ಮಾಡಬೇಡಿ. ಈ ವೇದಿಕೆ ರಾಜಕೀಯಕ್ಕಾಗಿ ಅಲ್ಲ. ನೀವು ಸುಳ್ಳು ಹೇಳುತ್ತಿದ್ದೀರಿ. ಇದನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಬೇಡಿ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಮತಾ ಅವರ ಭಾಷಣದ ವಿಡಿಯೋ ವೈರಲ್ ಆಗುತ್ತಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.



ಪ್ರತಿಭಟನೆಯ ನಡುವೆಯೂ ಮಮತಾ ತಮ್ಮ ಭಾಷಣವನ್ನು ಮುಂದುವರಿಸಿದ್ದಾರೆ. ಏಕತೆ ಸ್ವಾಮಿ ವಿವೇಕಾನಂದರ ನಂಬಿಕೆ. ನಾನು ಸಾಯುವ ಮೊದಲು ಏಕತೆಯನ್ನು ನೋಡಲು ಬಯಸುತ್ತೇನೆ. ಏಕತೆಯನ್ನು ಕಾಪಾಡಿಕೊಳ್ಳುವುದು ಕಷ್ಟದ ಕೆಲಸ, ಆದರೆ ಜನರನ್ನು ವಿಭಜಿಸಲು ಕೇವಲ ಒಂದು ಕ್ಷಣ ಮಾತ್ರ ಸಾಕು. ತಮ್ಮ ಸರ್ಕಾರ ಎಲ್ಲಾ ಜಾತಿ ಮತ್ತು ಧರ್ಮಗಳಿಗಾಗಿ ಕೆಲಸ ಮಾಡುತ್ತದೆ ಎಂದು ಅವರು ಹೇಳಿದರು ಬಂಗಾಳ ಸರ್ಕಾರದ ಕನ್ಯಾಶ್ರೀ ಮತ್ತು ಲಕ್ಷ್ಮಿ ಭಂಡಾರ್‌ನಂತಹ ಯೋಜನೆಗಳನ್ನು ಉಲ್ಲೇಖಿಸಿದ ಬ್ಯಾನರ್ಜಿ, ತಮ್ಮ ಸರ್ಕಾರ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದರು.

ಭಾಷಣದ ವೇಳೆ ವಿದ್ಯಾರ್ಥಿಯೊಬ್ಬ ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಪ್ರೇಕ್ಷಕರೊಬ್ಬರು ಪ್ರಶ್ನೆ ಎತ್ತಿದರು. ಇದಕ್ಕೆ ಮಮತಾ, "ಈ ವಿಷಯ ರಾಜಕೀಯಕ್ಕೆ ಸಂಬಂಧಿಸಿಲ್ಲ. ಈ ಪ್ರಕರಣ ಕೇಂದ್ರ ಸರ್ಕಾರದಲ್ಲಿದೆ ಮತ್ತು ನ್ಯಾಯಾಲಯದ ವ್ಯಾಪ್ತಿಯಲ್ಲಿದೆ. ಇಲ್ಲಿ ರಾಜಕೀಯ ಮಾಡಬೇಡಿ" ಎಂದು ಉತ್ತರಿಸಿದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಮತಾ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಆರ್‌ಜಿ ಕರ್ ಪ್ರಕರಣಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಪ್ರದರ್ಶಿಸಿದರು.

ಈ ಸುದ್ದಿಯನ್ನೂ ಓದಿ: Mamata Banerjee: ಬಿಳಿ ಸೀರೆ, ಜಾಕೆಟ್‌, ಚಪ್ಪಲಿ ಹಾಕಿ ಲಂಡನ್‌ನಲ್ಲಿ ಮಮತಾ ಬ್ಯಾನರ್ಜಿ ಜಾಗಿಂಗ್‌ ; ವಿಡಿಯೋ ವೈರಲ್‌

ನೀವು ಹಿಂದೂ ವಿರೋಧಿಯೇ? ಎಂದು ಮಮತಾ ಬ್ಯಾನರ್ಜಿ ಅವರಿಗೆ ಕೇಳಲಾಯಿತು. ಆಗ ಮಮತಾ ಬ್ಯಾನರ್ಜಿ ಉತ್ತರಿಸಿ, ನಾನು ಎಲ್ಲರಿಗಾಗಿ ಕೆಲಸ ಮಾಡುತ್ತೇನೆ. ನಾನು ಏಳು ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದೇನೆ ಮತ್ತು ಸರ್ಕಾರದಿಂದ ಒಂದು ರೂಪಾಯಿ ಪಿಂಚಣಿಯನ್ನೂ ಪಡೆಯುವುದಿಲ್ಲ" ಎಂದು ಉತ್ತರಿಸಿದರು. "ಅತಿ ಎಡಪಂಥೀಯ ಮತ್ತು ಕೋಮುವಾದಿ ಶಕ್ತಿಗಳು ಇಂತಹ ಆರೋಪಗಳನ್ನು ಮಾಡುತ್ತಿವೆ" ಎಂದು ಅವರು ಹೇಳಿದ್ದಾರೆ.