ನವದೆಹಲಿ: ಸಾರ್ವಜನಿಕ ಸಭೆಯೊಂದರಲ್ಲಿ ಭಾಷಣ ಮಾಡಿರುವ ಜೈಶ್-ಎ-ಮೊಹಮ್ಮದ್(Jaish-E-Mohammad) ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್(Masood Azar) ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪಾಕಿಸ್ತಾನಕ್ಕೆ ಭಾರತ ಒತ್ತಾಯಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿದ್ದು, ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಪಾಕಿಸ್ತಾನ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
#WATCH | On Masood Azhar, MEA official spokesperson Randhir Jaiswal says, "He is an UN-designated terrorist. We demand that strong action be taken against him so that he is brought to justice. There has been a denial that he is not there in Pakistan. What you are referring to, if… pic.twitter.com/ceZPHuEUZp
— ANI (@ANI) December 6, 2024
ಅಜರ್ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರನ್ನು ನ್ಯಾಯಾಂಗಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ. ಆತ ಪಾಕಿಸ್ತಾನದಲ್ಲಿ ಇಲ್ಲವೇ ಇಲ್ಲ ಎಂದು ಅಲ್ಲಿನ ಸರ್ಕಾರ ಹೇಳುತ್ತಲೇ ಇದೆ. ಆದರೆ ಇದೀಗ ಆತ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡುತ್ತಿದ್ದಾನೆ. ಇದು ಪಾಕಿಸ್ತಾನದ ದ್ವಂದ್ವ ನೀತಿಯನ್ನು ಬಯಲು ಮಾಡುತ್ತಿದೆ. ಮಸೂದ್ ಅಜರ್ ಭಾರತದ ಮೇಲಿನ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ ಮತ್ತು ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಜೈಸ್ವಾಲ್ ಹೇಳಿದ್ದಾರೆ.
ಗ್ರೂಪ್‌ನ ಆನ್‌ಲೈನ್ ಡಿಜಿಟಲ್ ಪ್ಲಾಟ್‌ಫಾರ್ಮ್ ಮಂಗಳವಾರ ಘೋಷಿಸಿದಂತೆ ಜೈಶ್-ಎ-ಮೊಹಮ್ಮದ್ (JEM) ಸದಸ್ಯರಿಗೆ ಅಜರ್ 20 ವರ್ಷಗಳ ನಂತರ ತಮ್ಮ ಮೊದಲ ಭಾಷಣ ಮಾಡಿದ್ದ. ಭಾರತ ಮತ್ತು ಇಸ್ರೇಲ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದಾನೆ. ಮಸೂದ್ ಅಜರ್ ಭಾಷಣದ ದಿನಾಂಕ ಅಥವಾ ಸ್ಥಳವನ್ನು ಬಹಿರಂಗಪಡಿಸಿಲ್ಲ.
ಈ ಸುದ್ದಿಯನ್ನೂ ಓದಿ: Terror Attack: ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಶವವಾಗಿ ಪತ್ತೆ