Modi In Mauritius: ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರವಾಸದಲ್ಲಿದ್ದಾರೆ. ಅವರಿಗೆ ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಮ್ ಅವರು ದೇಶದ ದೇಶದ ಅತ್ಯುನ್ನತ ಪ್ರಶಸ್ತಿಯಾದ “ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್” ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಮೋದಿಗೆ ಪ್ರಶಸ್ತಿ ಪ್ರದಾನ

ಪೋರ್ಟ್ ಲೂಯಿಸ್ : ಪ್ರಧಾನಿ ನರೇಂದ್ರ ಮೋದಿ ( Modi In Mauritius) ಅವರು ಮಾರಿಷಸ್ ಪ್ರವಾಸದಲ್ಲಿದ್ದಾರೆ. ಅವರಿಗೆ ಮಾರಿಷಸ್ ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಮ್ ಅವರು ದೇಶದ ದೇಶದ ಅತ್ಯುನ್ನತ ಪ್ರಶಸ್ತಿಯಾದ “ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್” ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಭಾರತ ಮತ್ತು ಮಾರಿಷಸ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ನೀಡಿದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವ ಮೊದಲ ಭಾರತೀಯ ಮೋದಿ ಅವರಾಗಿದ್ದಾರೆ.
ಆರ್ಡರ್ ಆಫ್ ದಿ ಸ್ಟಾರ್ ಆ್ಯಂಡ್ ಕೀ ಆಫ್ ದಿ ಇಂಡಿಯನ್ ಓಷನ್ ಮಾರಿಷಸ್‌ನಲ್ಲಿ ಅತ್ಯುನ್ನತ ಗೌರವವಾಗಿದೆ. ಇದನ್ನು ರಾಷ್ಟ್ರ ಮತ್ತು ಅದರ ಜನರಿಗೆ ಅಸಾಧಾರಣ ಸೇವೆಗಾಗಿ ನೀಡಲಾಗುತ್ತದೆ. ಈ ವಿಶಿಷ್ಟ ಮನ್ನಣೆ ಪಡೆದ ಐದನೇ ವಿದೇಶಿ ಪ್ರಜೆಯೆಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ ಎಂದು ರಾಮ್‌ಗೂಲಮ್ ಹೇಳಿದ್ದಾರೆ. ಮಂಗಳವಾರದಂದು, ಪ್ರಧಾನಿ ಮೋದಿ ಅವರು ಮಾರಿಷಸ್ ಪ್ರಧಾನಿ ಮತ್ತು ಅವರ ಪತ್ನಿ ವೀಣಾ ರಾಮ್‌ಗೂಲಮ್ ಅವರಿಗೆ ಸಾಗರೋತ್ತರ ಭಾರತೀಯ ನಾಗರಿಕ (OCI) ಕಾರ್ಡ್‌ಗಳನ್ನು ನೀಡುವುದಾಗಿ ಘೋಷಿಸಿದರು. ಈ ನಿರ್ಧಾರವು ಮಾರಿಷಸ್‌ನೊಂದಿಗಿನ ತನ್ನ ವಲಸೆ ಮತ್ತು ದ್ವಿಪಕ್ಷೀಯ ಸಂಬಂಧಗಳಿಗೆ ಭಾರತದ ಬದ್ಧತೆಯನ್ನು ಗುರುತಿಸಿದೆ.
PM Narendra Modi honored with Mauritius' highest award, making India proud once again! pic.twitter.com/yQ3VBJdNLa
— Kaushik Vekariya (@ikaushikvekaria) March 11, 2025
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ಭೇಟಿಗಾಗಿ ಮಾರಿಷಸ್‌ಗೆ ತೆರಳಿದ್ದಾರೆ. ಮಾರಿಷಸ್‌ನ ಪ್ರಧಾನಿ ನವೀನಚಂದ್ರ ರಾಮ್‌ಗೂಲಂ ಮೋದಿ ಅವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು. ಪ್ರಧಾನಿ ಮಾರಿಷಸ್‌ನ ಉನ್ನತ ನಾಯಕತ್ವದೊಂದಿಗೆ ಸಭೆ ನಡೆಸಲಿದ್ದು, ಸಾಮರ್ಥ್ಯ ವೃದ್ಧಿ, ವ್ಯಾಪಾರ ಕ್ಷೇತ್ರಗಳಲ್ಲಿ ನಡೆಸಲಿದ್ದು, ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ. ಮೋದಿ ಭಾರತ ಅನುದಾನಿತ 20 ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟನೆ ಮಾಡಿದ್ದಾರೆ. ನಾಗರಿಕ ಸೇವಾ ಕಾಲೇಜು ಕಟ್ಟಡವನ್ನು ಉದ್ಘಾಟಿಸಿದರು. ಈ ಕಟ್ಟಡ ನಿರ್ಮಾಣವು ಅಂದಾಜು 4.5 ಮಿಲಿಯನ್ ಅಮೆರಿಕನ್ ಡಾಲರ್ ವೆಚ್ಚದಲ್ಲಿ ಪೂರ್ಣಗೊಂಡಿದೆ. ಈ ಹಿಂದೆ ಮೋದಿ 2015 ಮತ್ತು 1998 ರಲ್ಲಿ ಮಾರಿಷಸ್‌ಗೆ ಭೇಟಿ ನೀಡಿದ್ದರು.