Thursday, 12th September 2024

ಬೋರಿಸ್ ಸರ್ಕಾರದ ಮತ್ತಿಬ್ಬರು ಸಚಿವರ ರಾಜೀನಾಮೆ

ಲಂಡನ್: ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಸರ್ಕಾರದ ಮತ್ತಿಬ್ಬರು ಸಚಿವರು ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ಬಿಕ್ಕಟ್ಟು ಸೃಷ್ಟಿಯ ಸುಳಿವು ನೀಡಿದೆ.

ಮಕ್ಕಳು ಮತ್ತು ಕುಟುಂಬಗಳ ಸಚಿವ ವಿಲ್ ಕ್ವಿನ್ಸ್ ಅವರು “ನನ್ನ ರಾಜೀನಾಮೆ ನೀಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಹೇಳಿದ್ದಾರೆ. ಕಿರಿಯ ಸಾರಿಗೆ ಸಚಿವ ಲಾರಾ ಟ್ರಾಟ್ ಸರ್ಕಾರದಲ್ಲಿ ನಂಬಿಕೆ ಕಳೆದುಕೊಂಡಿದ್ದಕ್ಕಾಗಿ ರಾಜೀನಾಮೆ ಸಲ್ಲಿಸು ತ್ತಿದ್ದೇನೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮಂಗಳವಾರ ಯುಕೆ ಹಣಕಾಸು ಸಚಿವ ರಿಷಿ ಸುನಕ್ ಮತ್ತು ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸರ್ಕಾರದಿಂದ ಹೊರ ಬಂದಿದ್ದರು.