Saturday, 14th December 2024

ಮಾಸ್ಕೋ: 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ.

ಮಾಸ್ಕೋದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ರಾತ್ರಿಯಿಡೀ ಫೈರ್ ಅಲಾರಂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ಕಾರಣ ಎಂಟು ಜನರು ಬೆಂಕಿಗಾಹು ತಿಯಾಗಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡ 4 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದವರು ಬೆಂಕಿ ನಂದಿಸಿದ್ದಾರೆ. ಈ ವೇಳೆ ಕಟ್ಟಡದಲ್ಲಿದ್ದ 200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.