#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Donald Trump : ಡೊನಾಲ್ಡ್‌ ಟ್ರಂಪ್‌ ಪದಗ್ರಹಣ;ಔತಣಕೂಟದಲ್ಲಿ ಪಾಲ್ಗೊಂಡ ಮುಖೇಶ್‌ ಅಂಬಾನಿ ದಂಪತಿ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಡೊನಾಲ್ಡ್‌ ಟ್ರಂಪ್‌ ಅವರು ಸೋಮವಾರ(ಜ.20) 47ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಇಂದು ಭಾರತದ ಖ್ಯಾತ ಉದ್ಯಮಿ ಮುಖೇಶ್‌ ಅಂಬಾನಿ ದಂಪತಿ ಟ್ರಂಪ್‌ ಅವರನ್ನು ಭೇಟಿಯಾಗಿದ್ದು,ಔತಣಕೂಟದಲ್ಲಿ ಪಾಲ್ಗೊಂಡಿದ್ದಾರೆ.

ಡೊನಾಲ್ಡ್‌ ಟ್ರಂಪ್‌ ಭೇಟಿಯಾದ ಮುಖೇಶ್‌ ಅಂಬಾನಿ ದಂಪತಿ

ಡೊನಾಲ್ಡ್‌ ಟ್ರಂಪ್‌ ಜೊತೆಗೆ ಅಂಬಾನಿ ದಂಪತಿ

Profile Deekshith Nair Jan 19, 2025 7:32 PM

ವಾಷಿಂಗ್ಟನ್:‌ ಅಮೆರಿಕ(America) ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಡೊನಾಲ್ಡ್‌ ಟ್ರಂಪ್‌(Donald Trump) ಅವರು ಸೋಮವಾರ(ಜ.20) 47ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಭಾರತದ ಖ್ಯಾತ ಉದ್ಯಮಿ ಮುಖೇಶ್‌ ಅಂಬಾನಿ ದಂಪತಿ ಇಂದು(ಜ.19) ಟ್ರಂಪ್‌ ಅವರನ್ನು ಭೇಟಿಯಾಗಿದ್ದು,ಸಂತಸದ ಔತಣ ಕೂಟದಲ್ಲಿ ಪಾಲ್ಗೊಂಡಿದ್ದಾರೆ.



ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ವಾಷಿಂಗ್ಟನ್ ಡಿಸಿಯಲ್ಲಿ‌ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ‌ ಹೋಗಿದ್ದಾರೆ. ಪದಗ್ರಹಣಕ್ಕೂ ಒಂದು ದಿನ ಮೊದಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿದ್ದು, ಹಲವು ಫೋಟೋಗಳಿಗೆ ಪೋಸ್ ನೀಡಿದ್ದಾರೆ.



ಟ್ರಂಪ್ ಅವರ ಪ್ರಮಾಣವಚನಕ್ಕೂ ಮೊದಲು "ಕ್ಯಾಂಡಲ್ಲೈಟ್ ಡಿನ್ನರ್" ಗೆ ಆಹ್ವಾನಿಸಲಾದ ಭಾರತೀಯ ಉದ್ಯಮಿಗಳಲ್ಲಿ ಅಂಬಾನಿ ದಂಪತಿಗಳು ಪ್ರಮುಖರು. ಔತಣಕೂಟದಲ್ಲಿ ಭಾರತದ ಹಲವು ಉದ್ಯಮಿಗಳು ಪಾಲ್ಗೊಂಡಿದ್ದಾರೆ ಎನ್ನಲಾಗಿದೆ. ಮುಖೇಶ್‌ ಅಂಬಾನಿ ದಂಪತಿಯನ್ನು ಡೊನಾಲ್ಡ್‌ ಟ್ರಂಪ್‌ ಮಾತನಾಡಿಸಿ ಕೈ ಕುಲುಕಿದ್ದು,ಕುಶಲೋಪರಿ ವಿಚಾರಿಸಿದ್ದಾರೆ. ಸದ್ಯ ಟ್ರಂಪ್‌ ಜೊತೆಗಿನ ಅಂಬಾನಿ ದಂಪತಿ ಫೋಟೊ ಸಖತ್‌ ವೈರಲ್‌ ಆಗಿದೆ.

ಈ ಸುದ್ದಿಯನ್ನೂ ಓದಿ:Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ