Thursday, 12th December 2024

ಇಸ್ರೇಲ್‌ ನೂತನ ಪ್ರಧಾನಿಯಾಗಿ ನೆಫ್ತಾಲಿ ಬೆನೆಟ್ ಆಯ್ಕೆ

ಟೆಲ್ ಅವಿವ್: ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದ್ದು, ಅವರ ಉತ್ತರಾಧಿ ಕಾರಿಯಾಗಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

60-59 ಅತ್ಯಲ್ಪ ಬಹುಮತದಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್‌ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದೆ.

ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್‌ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟು ಕೊಡಲಿದ್ದಾರೆ.