Wednesday, 11th December 2024

ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪ

ಖಾಠ್ಮಂಡು: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ-ಎನ್‌ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರ ರಾಷ್ಟ್ರೀಯ ಕೇಂದ್ರದ ಪ್ರಕಾರ ನೇಪಾಳ ಭೂಕಂಪದ ಕೇಂದ್ರಬಿಂದುವಾಗಿದೆ.

ಕಳೆದ ಐದು ಗಂಟೆಗಳಲ್ಲಿ ನೇಪಾಳದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದೆ. ಮಂಗಳವಾರ ರಾತ್ರಿ 4.9 ತೀವ್ರತೆಯ ಮೊದಲ ಭೂಕಂಪ, ನಂತರ 3.5 ತೀವ್ರತೆಯ ಭೂಕಂಪ ದಾಖಲಾಗಿದೆ.

ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಪ್ರಬಲ ಕಂಪನದ ಅನುಭವವಾಗಿದೆ.