Thursday, 12th December 2024

ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 154

ಠ್ಮಂಡು: ಶುಕ್ರವಾರ ತಡರಾತ್ರಿ ನೇಪಾಳದಲ್ಲಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದಿಂದ ಸಾವು-ನೋವುಗಳ ಸಂಖ್ಯೆ ಹೆಚ್ಚಾಗಿದೆ. ಸಾವಿನ ಸಂಖ್ಯೆ 154ಕ್ಕೆ ಏರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಈ ಪ್ರಬಲ ಭೂಕಂಪದಲ್ಲಿ ನಲ್ಗಾಡ್ ಪುರಸಭೆಯ ಉಪ ಮೇಯರ್ ಸೇರಿದಂತೆ 154 ಜನರು ಸಾವನ್ನಪ್ಪಿದ್ದಾರೆ.

ನೇಪಾಳದ ಪ್ರಧಾನಿ ಪುಷ್ಪ ಕಮಲ್ ಅವರು ಭೂಕಂಪದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.